ಟೂಲ್ ಕಿಟ್ ಪ್ರಕರಣ: ದಿಶಾ ರವಿಯನ್ನು ಒಂದು ದಿನ ಪೊಲೀಸ್ ವಶಕ್ಕೆ ನೀಡಿದ ದೆಹಲಿ ಕೋರ್ಟ್

ಟೂಲ್ ಕಿಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರನ್ನು ದೆಹಲಿ ಕೋರ್ಟ್ ಸೋಮವಾರ ಮತ್ತೆ ಒಂದು ದಿನ ದೆಹಲಿ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

Published: 22nd February 2021 05:57 PM  |   Last Updated: 22nd February 2021 05:57 PM   |  A+A-


disha ravi

ದಿಶಾ ರವಿ

Posted By : Lingaraj Badiger
Source : PTI

ನವದೆಹಲಿ: ಟೂಲ್ ಕಿಟ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರನ್ನು ದೆಹಲಿ ಕೋರ್ಟ್ ಸೋಮವಾರ ಮತ್ತೆ ಒಂದು ದಿನ ದೆಹಲಿ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

ಸಹ-ಆರೋಪಿಗಳೊಂದಿಗೆ ದಿಶಾ ರವಿ ವಿಚಾರಣೆ ನಡೆಸುವ ಅಗತ್ಯ ಇದ್ದು, ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮಾಡಿದ್ದ ಮನವಿಯನ್ನು ಪುರಷ್ಕರಿಸಿದ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪಂಕಜ್ ಶರ್ಮಾ ಅವರು, ದಿಶಾ ರವಿಯ ವಿಚಾರಣೆಗೆ ಅನುಮತಿ ನೀಡಿದ್ದಾರೆ.

ದಿಶಾ ರವಿ ಅವರ ಮೂರು ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ಒಂದು ದಿನ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.

ವಿಚಾರಣೆ ವೇಳೆ ಐದು ದಿನಗಳ ಕಾಲ ದಿಶಾ ರವಿಯನ್ನು ಕಸ್ಟಡಿಗೆ ನೀಡಬೇಕು ಎಂದು ದೆಹಲಿ ಪೊಲೀಸರು ಕೇಳಿದ್ದರು. ಆದರೆ ಇದನ್ನು ಅಮಾನ್ಯ ಮಾಡಿದ ನ್ಯಾಯಾಲಯ ಒಂದು ದಿನದ ಮಟ್ಟಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬುದನ್ನು ವಿವರಿಸುವ ‘ಟೂಲ್‌ಕಿಟ್‌’ ಅನ್ನು ಸಿದ್ಧಪಡಿಸಿ, ಅದನ್ನು ಅಂತರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಅವರಿಗೆ ಕಳುಹಿಸಿದ ಆರೋಪದ ಮೇಲೆ ದಿಶಾ ರವಿ ಅವರನ್ನು ಬಂಧಿಸಲಾಗಿದೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp