ಸ್ವಸ್ಥ ರಾಷ್ಟ್ರ ನಿರ್ಮಾಣಕ್ಕಾಗಿ ಆರೋಗ್ಯ ಕ್ಷೇತ್ರದ ನಾಲ್ಕು ರಂಗಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ: ಪ್ರಧಾನಿ ಮೋದಿ

ಕೊರೋನಾ ಮಾತ್ರವಲ್ಲ  ಭವಿಷ್ಯದಲ್ಲಿ ಎದುರಾಗಲಿರುವ ಎಲ್ಲಾ ಬಗೆಯ ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ದೇಶದ ಆರೋಗ್ಯ ವಲಯವನ್ನು ಸಜ್ಜುಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.

Published: 23rd February 2021 12:30 PM  |   Last Updated: 23rd February 2021 02:24 PM   |  A+A-


PM Modi

ಪ್ರಧಾನಿ ಮೋದಿ

Posted By : Manjula VN
Source : Online Desk

ನವದೆಹಲಿ: ಕೊರೋನಾ ಮಾತ್ರವಲ್ಲ  ಭವಿಷ್ಯದಲ್ಲಿ ಎದುರಾಗಲಿರುವ ಎಲ್ಲಾ ಬಗೆಯ ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡಲು ದೇಶದ ಆರೋಗ್ಯ ವಲಯವನ್ನು ಸಜ್ಜುಗೊಳಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಆರೋಗ್ಯ ವಲಯಕ್ಕೆ ಸಂಬಂಧಿಸಿದಂತೆ ಬಜೆಟ್ ಅಂಶಗಳ ಕುರಿತು ವೆಬಿನಾರ್ ಮೂಲಕ ಮಾತನಾಡಿರುವ ಪ್ರಧಾನಿ ಮೋದಿಯವರು, ಬಜೆಟ್ ನಲ್ಲಿ ಘೋಷಿಸಲಾಗಿರುವ ಎಲ್ಲ ಯೋಜನೆಗಳು ಏಪ್ರಿಲ್ 1ರಿಂದ ಆರಂಭವಾಗಲಿದೆ. ಹಾಗಾಗಿ  ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಯೋಜನೆಗಳ ಜಾರಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಆರೋಗ್ಯ ವಲಯಕ್ಕೆ  ಹಿಂದೆಂದೂ ನೀಡದಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದ್ದು, ಹೆಚ್ಚೆಚ್ಚು ಅನುದಾನವನ್ನು ನೀಡಲಾಗಿದೆ. ಇದು ಎಲ್ಲ ದೇಶವಾಸಿಗಳ ಸ್ವಾಸ್ಥ್ಯ ರಕ್ಷಣೆಯ ಬದ್ಧತೆಯ ಪ್ರತೀಕವಾಗಿದೆ ಎಂದು ತಿಳಿಸಿದ್ದಾರೆ.

ಕೊರೋನಾ ಅಗ್ನಿಪರೀಕ್ಷೆಯನ್ನು ದೇಶ ಯಶಸ್ವಿಯಾಗಿ ಎದುರಿಸಿದೆ. ಲಕ್ಷಾಂತರ ಜೀವವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ದೇಶದಲ್ಲಿ ಪ್ರಯೋಗಾಲಯ ಸೇರಿದಂತೆ ಆರೋಗ್ಯ ವಲಯದಲ್ಲಿ  ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಮೂಲಸೌಕರ್ಯವನ್ನು ಭಾರಿ ಪ್ರಮಾಣದಲ್ಲಿ ವೃದ್ಧಿಸಲಾಗಿದೆ ಎಂದಿದ್ದಾರೆ.

ಭವಿಷ್ಯದಲ್ಲಿ ಎದುರಾಗಬಹುದಾದ ಸಾಂಕ್ರಾಮಿಕಗಳ ವಿರುದ್ಧ ಹೋರಾಡಲು ಆರೋಗ್ಯ ಕ್ಷೇತ್ರದ ಬಲವರ್ಧನೆ ಅವಶ್ಯಕ. ಆ ನಿಟ್ಟಿನಲ್ಲಿ ವೈದ್ಯಕೀಯ ಉಪಕರಣಗಳಿಂದ ಔಷಧಿಗಳವರೆಗೆ ವೆಂಟಿಲೇಟರ್ ನಿಂದ ವ್ಯಾಕ್ಸಿನ್ ವರೆಗೆ, ವೈದ್ಯರಿಂದ ತಜ್ಞರವರೆಗೆ ಎಲ್ಲ ರೀತಿಯಲ್ಲೂ ದೇಶವನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಪಿಎಂ ಆತ್ಮನಿರ್ಭರ ಸ್ವಾಸ್ಥ್ಯ ಭಾರತ್ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಇದು ದೇಶದ ಆರೋಗ್ಯ ವಲಯದಲ್ಲಿ ಮಹತ್ವದ ಬದಲಾವಣೆಯನ್ನು ತರಲಿದೆಸ ಎಂದು ತಿಳಿಸಿದ್ದಾರೆ.

ಸ್ವಸ್ಥ ರಾಷ್ಟ್ರ ನಿರ್ಮಾಣಕ್ಕಾಗಿ ಆರೋಗ್ಯ ಕ್ಷೇತ್ರದ ನಾಲ್ಕು ರಂಗಗಳಿಗೆ ಹೆಚ್ಚು ಒತ್ತು

ಸ್ವಸ್ಥ ರಾಷ್ಟ್ರ ನಿರ್ಮಾಣಕ್ಕಾಗಿ ಆರೋಗ್ಯ ಕ್ಷೇತ್ರದ ನಾಲ್ಕು ರಂಗಗಳಿಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ.

ಕಾಯಿಲೆ ಬರದಂತೆ ತಡೆಗಟ್ಟುವುದು, ಸ್ವಸ್ಥ ಜೀವನಕ್ಕೆ ಉತ್ತೇಜನ, ಎಲ್ಲರಿಗೂ ಆರೋಗ್ಯ ಸೇವೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ, ವೃತ್ತಿಪರರ ಸಂಖ್ಯೆ ಹೆಚ್ಚಿಸುವುದಕ್ಕೆ ಒತ್ತು ನೀಡಲಾಗುತ್ತಿದೆ.

ಕಾಯಿಲೆ ಬರದಂತೆ ತಡೆಗಟ್ಟುವುದು, ಸ್ವಸ್ಥ ಜೀವನಕ್ಕೆ ಉತ್ತೇಜನ, ಎಲ್ಲರಿಗೂ ಆರೋಗ್ಯ ಸೇವೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ, ವೃತ್ತಿಪರರ ಸಂಖ್ಯೆ ಹೆಚ್ಚಿಸುವುದಕ್ಕೆ ಒತ್ತು ನೀಡಲಾಗುತ್ತಿದೆ. ಆಧುನಿಕ ತಂತ್ರಜ್ಞಾನದ ಸಮರ್ಥ ಬಳಕೆ ಮೂಲಕ ಆರೋಗ್ಯ ಸೇವೆಗಳನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸುಲಭವಾಗಿ ಸಿಗುವಂತೆ ಮಾಡುವುದು ಇಂದಿನ ತುರ್ತು ಎಂದು ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp