ಕೊರೋನಾ: ದೇಶಾದ್ಯಂತ 24 ಗಂಟೆಗಳಲ್ಲಿ 10,584 ಹೊಸ ಕೇಸ್ ಪತ್ತೆ, 78 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಯುತ್ತಿದ್ದು, ದೇಶದಲ್ಲಿಂದು 10,584 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,10,16,434ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Published: 23rd February 2021 10:43 AM  |   Last Updated: 23rd February 2021 02:21 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಯುತ್ತಿದ್ದು, ದೇಶದಲ್ಲಿಂದು 10,584 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,10,16,434ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಒಂದೇ ದಿನ ಮಹಾಮಾರಿ ವೈರಸ್ 78 ಮಂದಿನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,56,463ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,10,16,434 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 13,255 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,07,12,665ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,47,306 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,17,45,552 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp