ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದಲ್ಲಿ 6 ಮಂದಿ ಸಾವು: ಪ್ರಧಾನಿ ಮೋದಿ ತೀವ್ರ ಸಂತಾಪ

ಕನಿಷ್ಠ ಆರು ಮಂದಿಯ ಸಾವಿಗೆ ಕಾರಣವಾದ ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

Published: 23rd February 2021 10:18 AM  |   Last Updated: 23rd February 2021 10:18 AM   |  A+A-


PM modi

ಪ್ರಧಾನಿ ಮೋದಿ

Posted By : Manjula VN
Source : Online Desk

ಚಿಕ್ಕಬಳ್ಳಾಪುರ: ಕನಿಷ್ಠ ಆರು ಮಂದಿಯ ಸಾವಿಗೆ ಕಾರಣವಾದ ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣಗಳಲ್ಲಿ ಹಲವರು ಸಾವನ್ನಪ್ಪಿದ್ದು, ಘಟನೆ ಸಾಕಷ್ಟು ನೋವನ್ನು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಹಾಗೂ ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್‌ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ದುರಂತದಲ್ಲಿ ಮೂರವ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp