ಬಿಹಾರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

ಬಿಹಾರದ ಕತಿಹಾರ್ ಜಿಲ್ಲೆಯ ಕುರ್ಸೆಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

Published: 23rd February 2021 02:58 PM  |   Last Updated: 23rd February 2021 02:58 PM   |  A+A-


accident in Mangaluru

ಸಾಂದರ್ಭಿಕ ಚಿತ್ರ

Posted By : Lingaraj Badiger
Source : PTI

ಕತಿಹಾರ್: ಬಿಹಾರದ ಕತಿಹಾರ್ ಜಿಲ್ಲೆಯ ಕುರ್ಸೆಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಕುರ್ಸೆಲಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-31 ರಲ್ಲಿ ಎದುರು ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಈವರೆಗೆ ಗುರುತಿಸಲಾಗಿಲ್ಲ. ಸಂಚಾರ ಸುಗಮವಾಗಲು ಅಪಘಾತದಿಂದ ಜಖಂ ಆದ ವಾಹನಗಳನ್ನು ಹೆದ್ದಾರಿಯಿಂದ ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಘಟನೆ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, "ಬಿಹಾರದ ಕತಿಹಾರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪ್ರಾಣಹಾನಿ ಸಂಭವಿಸಿದೆ ಎಂಬ ದುಃಖದ ಸುದ್ದಿ ಕೇಳಿದೆ. ಮೃತ ಕುಟುಂಬ ಸದಸ್ಯರಿಗೆ ನಾನು ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಪ್ರತಿ ಮೃತ ವ್ಯಕ್ತಿಯ ರಕ್ತಸಂಬಂಧಿಗಳಿಗೆ ತ್ವರಿತವಾಗಿ ಪರಿಹಾರ ನೀಡುವಂತೆ ಮತ್ತು ಗಾಯಗೊಂಡವರಿಗೆ ಸರಿಯಾದ ವೈದ್ಯಕೀಯ ನೆರವು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp