
ಸ್ಪೋಟ (ಸಾಂದರ್ಭಿಕ ಚಿತ್ರ)
ಕೋಲ್ಕತಾ: ಪಶ್ಚಿಮ ಬಂಗಾಳದ ರೈಲು ನಿಲ್ದಾಣದಲ್ಲಿದ್ದ ಸಚಿವರ ಮೇಲೆ ಬಾಂಬ್ ದಾಳಿಯಾಗಿದ್ದು, ಈ ಘಟನೆಯಲ್ಲಿ ಒಬ್ಬರು ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಿಮಿತಿತಾ ರೈಲ್ವೆ ನಿಲ್ದಾಣ ಈ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಬಂಗಾಳ ಕಾರ್ಮಿಕ ಸಚಿವ ಜಾಕಿರ್ ಹುಸೇನ್ ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಹುಸೇನ್ ಕೋಲ್ಕತಾಗೆ ತೆರಳಲು ಪ್ಲಾಟ್ ಫಾರಂ ಸಂಖ್ಯೆ 2ರಲ್ಲಿ ರೈಲಿಗಾಗಿ ಕಾಯುತ್ತಿದ್ದರು, ಈ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಆಡಳಿತಾರೂಢ ಟಿಎಂಸಿ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ. ಅಂತೆಯೇ ಇಬ್ಬರು ಗಾಯಗೊಂಡಿದ್ದಾರೆ. ಬೈಕ್ನಲ್ಲಿ ಬಂದ ಆಕ್ರಮಣಕಾರರು ಬಾಂಬ್ ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿ ಸಂಬಂಧ ಬಾಂಗ್ಲಾ ಪ್ರಜೆ ಬಂಧನ
ಇನ್ನು ದಾಳಿ ಪ್ರಕರಣಕ್ಕೆ ಸಂಂಧಿಸಿದಂತೆ ಶಂಕಿತ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಯನ್ನು ಬಂಗಾಳ ಸಿಐಡಿ ವಶಕ್ಕೆ ನೀಡಲಾಗಿದೆ. ವಶಕ್ಕೆ ಪಡೆದ ಸಿಐಡಿ ತೀವ್ರ ತನಿಖೆ ನಡೆಸುತ್ತಿದೆ.