ಕೊರೋನಾ ನಿರ್ವಹಣೆಗಾಗಿ 10 ರಾಜ್ಯಗಳಿಗೆ ಉನ್ನತ ಮಟ್ಟದ ತಂಡ ನಿಯೋಜಿಸಿದ ಕೇಂದ್ರ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತಿರುವ 10 ರಾಜ್ಯಗಳಿಗೆ ಉನ್ನತ ಮಟ್ಟದ ಅಧಿಕಾರಿಗಳ ತಂಡ ನಿಯೋಜಿಸಿದೆ.

Published: 24th February 2021 03:05 PM  |   Last Updated: 24th February 2021 03:05 PM   |  A+A-


Two new COVID mutations found in Maharashtra's Amravati, Yavatmal as regions brace for lockdown

ಸಾಂದರ್ಭಿಕ ಚಿತ್ರ

Posted By : Lingaraj Badiger
Source : ANI

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತಿರುವ 10 ರಾಜ್ಯಗಳಿಗೆ ಉನ್ನತ ಮಟ್ಟದ ಅಧಿಕಾರಿಗಳ ತಂಡ ನಿಯೋಜಿಸಿದೆ.

ಮಹಾರಾಷ್ಟ್ರ, ಕೇರಳ, ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್, ಪಂಜಾಬ್, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಉನ್ನತ ಮಟ್ಟದ ಬಹು-ಶಿಸ್ತಿನ ತಂಡಗಳನ್ನು ನಿಯೋಜಿಸಿದೆ. ಈ ತಂಡ ಸಾರ್ವಜನಿಕ ಆರೋಗ್ಯಕ್ಕಾಗಿ ರಾಜ್ಯಗಳ ತೆಗೆಕೊಳ್ಳಬೇಕಾದ ಕ್ರಮಗಳ ಕುರಿತು ಸಲಹೆ ನೀಡಲಿದೆ.

ಮೂರು ಸದಸ್ಯರ ಬಹು-ಶಿಸ್ತಿನ ತಂಡಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇತ್ತೀಚಿನ ಏರಿಕೆಗೆ ಕಾರಣಗಳನ್ನು ಕಂಡುಹಿಡಿಯುತ್ತವೆ. ಕೊರೋನಾ ಚೈನ್ ಬ್ರೇಕ್ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯಗಳ ಆರೋಗ್ಯ ಅಧಿಕಾರಿಗಳಿಗೆ ಸಹಕರಿಸುತ್ತಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕೋವಿಡ್ ನಿರ್ವಹಣೆಯಲ್ಲಿ ಇದುವರೆಗೆ ಗಳಿಸಿದ ಲಾಭ ನಷ್ಟವಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ನಿಯಮಿತವಾಗಿ ವಿಮರ್ಶಾತ್ಮಕವಾಗಿ ಪರಿಶೀಲಿಸುವಂತೆ ಆರೋಗ್ಯ ಸಚಿವಾಲಯ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp