ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿದ್ದ ಕಾರು ಪತ್ತೆ!

 ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ದಕ್ಷಿಣ ಮುಂಬೈನ  ರಿಲಯನ್ಸ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಎಂಟಿಲಿಯಾ ನಿವಾಸದ ಬಳಿ ಗುರುವಾರ ಸಂಜೆ ಅನುಮಾನಾಸ್ಪದ ಕಾರೊಂದು ಪತ್ತೆಯಾಗಿದೆ.

Published: 25th February 2021 09:44 PM  |   Last Updated: 25th February 2021 09:44 PM   |  A+A-


ಸ್ಫೋಟಕ ತುಂಬಿದ್ದ ಕಾರು

Posted By : Raghavendra Adiga
Source : Online Desk

ಮುಂಬೈ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ದಕ್ಷಿಣ ಮುಂಬೈನ  ರಿಲಯನ್ಸ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಎಂಟಿಲಿಯಾ ನಿವಾಸದ ಬಳಿ ಗುರುವಾರ ಸಂಜೆ ಅನುಮಾನಾಸ್ಪದ ಕಾರೊಂದು ಪತ್ತೆಯಾಗಿದೆ.

ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶ್ ಮುಖ್ ಈ ಮಾಹಿತಿ ನೀಡಿದ್ದಾರೆ.

ಅಂಬಾನಿ ನಿವಾಸದ ಬಳಿ ಸ್ಕಾರ್ಪಿಯೋ ಕಾರು  ಪತ್ತೆಯಾಗಿದ್ದು  ಪೊಲೀಸ್ ಅಧಿಕಾರಿಗಳ ಪ್ರಕಾರ ಇಂದು ಸಂಜೆ ಅನುಮಾನಾಸ್ಪದ ವಾಹನ ಪತ್ತೆಯಾಗಿದೆ. ಶೀಘ್ರದಲ್ಲೇ ಪೋಲೀಸರು ಎಚ್ಚೆತ್ತು. ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (ಬಿಡಿಡಿಎಸ್) ಮತ್ತು ಇತರ ಪೊಲೀಸ್ ತಂಡಗಳು ತ್ವರಿತ ಕ್ರಮಗಳಿಗೆ ಮುಂದಾಗಿ ತಕ್ಷಣ ಸ್ಥಳಕ್ಕೆ ತಲುಪಿದವು.

ವಾಹನವನ್ನು ಪರಿಶೀಲಿಸಿದಾಗ ಜಿಲೆಟಿನ್ ಕಡ್ಡಿಗಳು ಹಾಗೂ ಕೆಲ ಸ್ಫೋಟಕ ವಸ್ತುಗಳನ್ನು ಕಂಡುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಇದು ಯೋಜಿತವಾದ ಸ್ಫೋಟಕ ಸಾಧನವಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಸಧ್ಯ ಸ್ಥಳಕ್ಕೆ ತಲುಪುವ ಎಲ್ಲಾ ರಸ್ತೆಗಳನ್ನು ಪೋಲೀಸರು ಸುತ್ತುವರಿದಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp