ನೀರವ್‌ ಮೋದಿಗಾಗಿ ಮುಂಬೈ ಆರ್ಥರ್ ಜೈಲಿನಲ್ಲಿ ವಿಶೇಷ ಕೊಠಡಿ ಸಜ್ಜು

ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಉದ್ಯಮಿ ನೀರವ್‌ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ಕೋರ್ಟ್‌ ಒಪ್ಪಿಗೆ ನೀಡುತ್ತಿದ್ದಂತೆಯೇ, ಇತ್ತ ಮುಂಬೈನ ಆರ್ಥರ್‌ ರಸ್ತೆಯ ಜೈಲಿನಲ್ಲಿ ಅವರಿಗಾಗಿ ವಿಶೇಷ ಕೊಠಡಿಯನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published: 26th February 2021 02:14 PM  |   Last Updated: 26th February 2021 02:14 PM   |  A+A-


neerav modi

ನೀರವ್ ಮೋದಿ

Posted By : Shilpa D
Source : PTI

ಮುಂಬಯಿ: ಬಹುಕೋಟಿ ವಂಚನೆ ಆರೋಪ ಎದುರಿಸುತ್ತಿರುವ ಉದ್ಯಮಿ ನೀರವ್‌ ಮೋದಿ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ಕೋರ್ಟ್‌ ಒಪ್ಪಿಗೆ ನೀಡುತ್ತಿದ್ದಂತೆಯೇ, ಇತ್ತ ಮುಂಬೈನ ಆರ್ಥರ್‌ ರಸ್ತೆಯ ಜೈಲಿನಲ್ಲಿ ಅವರಿಗಾಗಿ ವಿಶೇಷ ಕೊಠಡಿಯನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೀರವ್‌ ಮೋದಿಯನ್ನು ಜೈಲಿನಲ್ಲಿರಿಸಲು ಸಿದ್ಧತೆಗಳು ಪೂರ್ಣಗೊಂಡಿವೆ. ಅವರನ್ನು ಮುಂಬೈಗೆ ಕರೆತಂದ ನಂತರ, ಜೈಲಿನ ಬ್ಯಾರಕ್ ಸಂಖ್ಯೆ 12ರ ಮೂರು ಕೊಠಡಿಗಳ ಪೈಕಿ ಒಂದರಲ್ಲಿ ಇರಿಸಲಾಗುವುದು. 

ಇದು ಅತಿ ಹೆಚ್ಚು ಭದ್ರತೆ ಹೊಂದಿರುವ ಬ್ಯಾರಕ್ ಆಗಿದೆ‘ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ (ಪಿಎನ್‌ಬಿ)  13,500 ಕೋಟಿ ವಂಚಿಸಿರುವ ಆರೋಪ ಎದುರಿಸುತ್ತಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿ ವಿದೇಶಕ್ಕೆ ಪರಾರಿಯಾಗಿದ್ದರು.

ನೀರವ್‌ ಮೋದಿ ಅವರು ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆಯ ಅಂದಾಜು 2 ಬಿಲಿಯನ್‌ ಡಾಲರ್‌ ಪಿಎನ್‌ಬಿ ಹಗರಣದಲ್ಲಿ ಆರೋಪಿಯಾಗಿದ್ದು, ಅವರನ್ನು ಭಾರತಕ್ಕೆ ಹಸ್ತಾಂತರಿಸಬಹುದು ಎಂದು ಲಂಡನ್‌ನ ವೆಸ್ಟ್‌ಮಿನ್‌ಸ್ಟರ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ನ ಜಿಲ್ಲಾ ನ್ಯಾಯಾಧೀಶ ಸ್ಯಾಮ್ಯುಯೆಲ್‌ ಗೂಝ್ ಗುರುವಾರ ಆದೇಶಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp