‘ಭಯೋತ್ಪಾದನೆ ನಿಗ್ರಹ ಕಾರ್ಯಾಚಾರಣೆ ನಿಲ್ಲದು’: ಭಾರತ

ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದದ ಹೊರತಾಗಿಯೂ ಕಣಿವೆ ರಾಜ್ಯದಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯನ್ನು ನಿಲ್ಲಿಸುವುದಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

Published: 27th February 2021 06:31 PM  |   Last Updated: 27th February 2021 06:31 PM   |  A+A-


Indian Army

ಭಾರತೀಯ ಸೇನೆ

Posted By : Srinivasamurthy VN
Source : PTI

ಉಧಮ್ ಪುರ: ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದದ ಹೊರತಾಗಿಯೂ ಕಣಿವೆ ರಾಜ್ಯದಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯನ್ನು ನಿಲ್ಲಿಸುವುದಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಕದನವಿರಾಮ ಕುರಿತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಟ್ವೀಟ್ ಮಾಡಿದ ಬೆನ್ನಲ್ಲೇ ಭಾರತೀಯ ಸೇನೆ ಈ ಕುರಿತು ಸ್ಪಷ್ಟಪಡಿಸಿದೆ. ಈ ಕುರಿತಂತೆ ಮಾತನಾಡಿದ ಸೇನೆಯ ನಾರ್ಥರ್ನ್‌ ಕಮಾಂಡರ್‌ ಲೆಫ್ಟಿನೆಂಟ್‌ ಜನರಲ್‌ ವೈ.ಕೆ. ಜೋಶಿ ಅವರು, 'ಗಡಿ ನಿಯಂತ್ರಣ ರೇಖೆಯಲ್ಲಿ ಘೋಷಿಸಿರುವ  ಕದನ ವಿರಾಮದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆಗಳ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

ಉಧಮ್ ಪುರದಲ್ಲಿ ಯೋಧರಿಗೆ ಪದಕ ಪ್ರದಾನ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಭದ್ರತಾ ಪಡೆಗಳು ಸದಾ ಕಟ್ಟೆಚ್ಚರವಹಿಸಿವೆ. ಗಡಿಯಲ್ಲಿ ಎದುರಾಗಿರುವ ಎಲ್ಲ ಸವಾಲುಗಳನ್ನು ಸೇನೆ ಸಮರ್ಥವಾಗಿ ಎದುರಿಸಿದೆ. ಇನ್ನು ಮುಂದೆಯೂ  ನಾವು ಸದಾ ಕಟ್ಟೆಚ್ಚರವಹಿಸುತ್ತೇವೆ. ನಮ್ಮ ನೆರೆಯ ದೇಶಗಳು ಗಲಭೆ ಸೃಷ್ಟಿಸುವ ಪ್ರಯತ್ನಗಳನ್ನು ತಡೆಯುವಲ್ಲಿ ನಾರ್ಥರ್ನ್‌ ಕಮಾಂಡ್‌ ಪ್ರಮುಖ ಪಾತ್ರವಹಿಸಿದೆ.  ಕವಚದ ರೀತಿಯಲ್ಲಿ ಯೋಧರು ಎಲ್ಲ ಸವಾಲುಗಳನ್ನು ಎದುರಿಸಿದ್ದಾರೆ. ನಮ್ಮ ದೇಶದ ಮೇಲೆ ದುಷ್ಟ ನೋಟ ಬೀರಿದಾಗ ಭಾರತೀಯ ಸೇನೆ ತಕ್ಕ  ಉತ್ತರ ನೀಡಿದೆ ಎಂದು ಹೇಳಿದ್ದಾರೆ.
 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp