ಎನ್ ಡಿಎ ಪರ ಮತ ಹಾಕಿದರೆ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸುತ್ತೇವೆ: ಪುದುಚೆರಿ ಜನತೆಗೆ ಅಮಿತ್ ಶಾ ಅಭಯ 

ಪಂಚರಾಜ್ಯಗಳಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಕರೈಕಲ್ ನಲ್ಲಿ ಚುನಾವಣಾ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

Published: 28th February 2021 01:47 PM  |   Last Updated: 28th February 2021 01:50 PM   |  A+A-


Amit Shah

ಅಮಿತ್ ಶಾ

Posted By : Sumana Upadhyaya
Source : ANI

ಪುದುಚೆರಿ: ಪಂಚರಾಜ್ಯಗಳಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಕರೈಕಲ್ ನಲ್ಲಿ ಚುನಾವಣಾ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ಮೇಲೆ ಹರಿಹಾಯ್ದರು, ಪುದುಚೆರಿಯಲ್ಲಿ ಕಾಂಗ್ರೆಸ್ ಆಡಳಿತವಿದ್ದ ಸಂದರ್ಭದಲ್ಲಿ ಜನತೆಗೆ ಉಪಯೋಗವಾಗುವಂತಹ ಯಾವುದೇ ಕೆಲಸ ಮಾಡಲಿಲ್ಲ ಎಂದು ಆರೋಪಿಸಿದರು.

ಪುದುಚೆರಿಯ ಶೇಕಡಾ 75ರಷ್ಟು ಮಂದಿ ಯುವಜನತೆ ನಿರುದ್ಯೋಗಿಗಳಾಗಿದ್ದಾರೆ. ಎನ್ ಡಿಎ ಸರ್ಕಾರ ಪರ ಮತ ಹಾಕಿದರೆ ನಾವು ನಿರುದ್ಯೋಗ ಸಮಸ್ಯೆಯನ್ನು ಶೇಕಡಾ 40ಕ್ಕಿಂತ ಕೆಳಮಟ್ಟಕ್ಕೆ ತರುತ್ತೇವೆ ಎಂದು ಆಶ್ವಾಸನೆ ನೀಡಿದರು.

ಇಂದು ಹಲವು ಕಾಂಗ್ರೆಸ್ ಕಾರ್ಯಕರ್ತರು ಪುದುಚೆರಿಯಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಬಿಜೆಪಿ ಸೇರುತ್ತಿದ್ದಾರೆ. ಏಕೆಂದರೆ ಕಾಂಗ್ರೆಸ್ ನಲ್ಲಿದ್ದರೆ ಪ್ರಗತಿಯಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ. ಮುಂದಿನ ಚುನಾವಣೆಯಲ್ಲಿ ಪುದುಚೆರಿಯಲ್ಲಿ ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿಯವರನ್ನು ಕೆಣಕಿದ ಅವರು, ಕೆಲ ದಿನಗಳ ಹಿಂದೆ ಮೀನುಗಾರಿಕಾ ಸಚಿವಾಲಯ ಏಕಿಲ್ಲ ಎಂದು ಇಲ್ಲಿಗೆ ಬಂದು ಕೇಳಿದ್ದರು. 2 ವರ್ಷದಿಂದ ಇರುವ ಸಚಿವಾಲಯ ಬಗ್ಗೆ ಮಾಹಿತಿ ಇಲ್ಲದ ನಾಯಕರು ಬೇಕೆ ಎಂದು ನಾನು ಕೇಳಲು ಇಲ್ಲಿನ ಜನತೆಯನ್ನು ಕೇಳುತ್ತೇನೆ ಎಂದು ತಿರುಗೇಟು ನೀಡಿದರು.


Stay up to date on all the latest ರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp