ಕೋವಿಡ್-19: ದೇಶದಲ್ಲಿಂದು 16,752 ಹೊಸ ಕೇಸ್ ಪತ್ತೆ, 113 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,752 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10,96,731ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Published: 28th February 2021 10:11 AM  |   Last Updated: 28th February 2021 10:11 AM   |  A+A-


Filep photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,752 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10,96,731ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಒಂದೇ ದಿನ ಮಹಾಮಾರಿ ವೈರಸ್ 113 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,57,051ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,10,96,731 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 11,718 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,07,75,169ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,64,511 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಇನ್ನು ಭಾರತದಲ್ಲಿ ಒಂದೇ ದಿನ 7,95,723 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 21,62,31,106 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,43,01,266 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp