ರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: 9 ಸಾವು, 12 ಜನರಿಗೆ ಗಾಯ

ರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

Published: 28th February 2021 02:16 PM  |   Last Updated: 28th February 2021 02:19 PM   |  A+A-


Filep photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಜೈಪುರ: ರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಎಸ್'ಯುವಿ ಕಾರಿನಲ್ಲಿದ್ದ ಜನರು ಉತ್ತರಪ್ರದೇಶದ ಕರೌಲಿ ಜಿಲ್ಲೆಯ ಕೈಲಾ ದೇವಿ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕಾರಿಗೆ ಟ್ರಕ್ ವೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿ, 9 ಮಂದಿ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ಉಜ್ವಲ್ (8), ವೈಷ್ಣವಿ (9), ಕಾರು ಚಾಲಕ ದೇವೇಂದ್ರ (27) ಎಂದು ಗುರ್ತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

ಇದರಂತೆ ಜಲೋರ್ ಜಿಲ್ಲೆಯಲ್ಲಿ ಬೈಕ್ ವೊಂದಕ್ಕೆ ಜೀಪ್ ವೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತಪಟ್ಟ ಮೂವರು ಸುಧಾಮಾತಾ ದೇವಾಲಯಕ್ಕೆ ಭೇಟಿ ನೀಡಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು ಎಂದು ತಿಳಿದುಬಂದಿದೆ. ಮೃತರನ್ನು ಜಿತೇಂದ್ರ ಕುಮಾರ್, ಮದನ್ ಕುಮಾರ್ ಹಾಗೂ ಮಹೇಂದ್ರ ಕುಮಾರ್ ಎಂದು ಗುರ್ತಿಸಲಾಗಿದೆ.

ಮತ್ತೊಂದು ಅಪಘಾತದಲ್ಲಿ ಕಾರೊಂದು ಬೈಕ್'ಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp