ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿಡುವಂತೆ ರೈತರಿಗೆ ಸೂಚಿಸಿದ ಟಿಕಾಯತ್!

ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಪ್ರತಿಭಟನೆ ಮುಂದುವರೆದಿರುವಂತೆಯೇ, ಯಾವುದೇ ವೇಳೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿ ಇಟ್ಟುಕೊಳ್ಳುವಂತೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರಿಗೆ ಹೇಳಿದ್ದಾರೆ.

Published: 28th February 2021 07:55 PM  |   Last Updated: 28th February 2021 07:55 PM   |  A+A-


Tikait1

ರಾಕೇಶ್ ಟಿಕಾಯತ್

Posted By : Nagaraja AB
Source : PTI

ನವದೆಹಲಿ: ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಪ್ರತಿಭಟನೆ ಮುಂದುವರೆದಿರುವಂತೆಯೇ, ಯಾವುದೇ ವೇಳೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿ ಇಟ್ಟುಕೊಳ್ಳುವಂತೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರಿಗೆ ಹೇಳಿದ್ದಾರೆ.

ಶಾಮ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ತಮ್ಮ ಹೊಲಗಳಲ್ಲಿ ಕೆಲಸವನ್ನು ಮುಂದುವರೆಸಬೇಕು, ಯಾವುದೇ ಸಂದರ್ಭದಲ್ಲಿ ದೆಹಲಿಗೆ ತೆರಳುವ ಸಾಧ್ಯತೆಯಿರುವುದರಿಂದ ಅವರು ತಮ್ಮ ಟ್ರ್ಯಾಕ್ಟರ್ ಗಳಿಗೆ ಇಂಧನ ತುಂಬಿಸಿ ಸಜ್ಜಾಗಿಡುವಂತೆ ಸೂಚಿಸಿದರು.

ರೈತರ ಒಪ್ಪಿಗೆ ಇಲ್ಲದೆ ಕೇಂದ್ರ ಸರ್ಕಾರ ಹೊಸ ಕೃಷಿ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿದ ಅವರು, ಸರ್ಕಾರ ಆ ಕಾನೂನುಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ದೇಶಾದ್ಯಂತ ಮಹಾ ಪಂಚಾಯತ್  ನಡೆಸಬೇಕಾದ ಅಗತ್ಯವಿದೆ. ಏಕೆಂದರೆ ಇದು ಇಡೀ ದೇಶದ  ತೊಂದರೆಯಾಗಿದೆ. ಈ ಪಂಚಾಯತ್ ಹೊರಗಡೆಯೂ ಧರಣಿಯನ್ನು ಮುಂದುವರೆಸಲಾಗುವುದು, ಇದೀಗ ಮಾರ್ಚ್ 24ರವರೆಗೂ ದೇಶಾದ್ಯಂತ ಪ್ರವಾಸ ಕೈಗೊಳ್ಳಲು ಯೋಜಿಸಲಾಗಿದೆ ಎಂದು ಟಿಕಾಯತ್ ಹೇಳಿದರು.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp