'ನಾಗ್ಪುರದಲ್ಲಿ ಅರ್ಧ ಪ್ಯಾಂಟ್ ಧರಿಸಿ ನಿಂತು ಮಾತನಾಡುವುದು ರಾಷ್ಟ್ರೀಯತೆಯಲ್ಲ'
ಅರ್ಧ ಪ್ಯಾಂಟ್ ಧರಿಸಿ ನಾಗ್ಪುರದಲ್ಲಿ ನಿಂತುಕೊಂಡು ಫೋನ್ನಲ್ಲಿ ಭಾಷಣಗಳನ್ನು ಮಾಡುವುದು ರಾಷ್ಟ್ರೀಯತೆಯಲ್ಲ, ಬದಲಾಗಿ ರೈತರ ಕಲ್ಯಾಣ ಯೋಜನೆಗಳ ಬಗ್ಗೆ ಮಾತಾಡಬೇಕು ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಟೀಕಿಸಿದ್ದಾರೆ.
Published: 04th January 2021 11:01 AM | Last Updated: 04th January 2021 12:24 PM | A+A A-

ಸಚಿನ್ ಪೈಲಟ್
ಜೈಪುರ: ಅರ್ಧ ಪ್ಯಾಂಟ್ ಧರಿಸಿ ನಾಗ್ಪುರದಲ್ಲಿ ನಿಂತುಕೊಂಡು ಫೋನ್ನಲ್ಲಿ ಭಾಷಣಗಳನ್ನು ಮಾಡುವುದು ರಾಷ್ಟ್ರೀಯತೆಯಲ್ಲ, ಬದಲಾಗಿ ರೈತರ ಕಲ್ಯಾಣ ಯೋಜನೆಗಳ ಬಗ್ಗೆ ಮಾತಾಡಬೇಕು ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಟೀಕಿಸಿದ್ದಾರೆ.
ರಾಷ್ಟ್ರೀಯತೆ ಅರ್ಧ ಪ್ಯಾಂಟ್ ಧರಿಸಿ ನಾಗ್ಪುರದಿಂದ ಫೋನ್ ಭಾಷಣಗಳನ್ನು ಮಾಡುವುದಲ್ಲ, ರೈತರ ಕಲ್ಯಾಣದ ಬಗ್ಗೆ ಮಾತನಾಡಿದರೆ ಅದುವೇ ನಿಜವಾದ ರಾಷ್ಟ್ರೀಯತೆ ಎಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಆರ್ಎಸ್ಎಸ್ ಹೆಸರನ್ನು ಉಚ್ಚರಿಸದೆ ಸಚಿನ್ ಪೈಲಟ್ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಸಚಿನ್ ಪೈಲಟ್ ಆಗ್ರಹಿಸಿದರು. ಇದು ಕೇಂದ್ರ ಸರ್ಕಾರದಿಂದ ಬಗೆಹರಿಸಲು ಸಾಧ್ಯವಾಗದಷ್ಟು ಸಂಕೀರ್ಣ ಸಮಸ್ಯೆಯಲ್ಲ. ಕೆಲವು ಕಾಯ್ದೆಗಳನ್ನು ಹಿಂಪಡೆಯುವುದರಿಂದ ಯಾವುದೇ ತೊಂದರೆಯಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಅವರು ಕಾನೂನುಗಳನ್ನು ಹಿಂತೆಗೆದುಕೊಂಡರೆ ನಾವು ಧನ್ಯವಾದ ಸಲ್ಲಿಸಲಿದ್ದೇವೆ ಎಂದು ಹೇಳಿದ್ದಾರೆ.
ಕಾಯ್ದೆಯಲ್ಲಿ ತಿದ್ದುಪಡಿ ಮಾಡುವುದು, ಅವುಗಳನ್ನು ಹಿಂತೆಗೆದುಕೊಳ್ಳುವುದು ಅಥವಾ ತಪ್ಪನ್ನು ಒಪ್ಪಿಕೊಳ್ಳುವುದು ಇವೆಲ್ಲವೂ ನಾಯಕರ ವರ್ಚಸ್ಸನ್ನು ಹೆಚ್ಚಿಸುತ್ತದೆ. ಇದು ನಾಚಿಕೆಗೇಡಿನ ವಿಷಯವಲ್ಲ ಎಂದು ಸಲಹೆ ಮಾಡಿದರು.