ಚಿತ್ರೀಕರಣಕ್ಕಾಗಿ ಭಾರತಕ್ಕೆ ಬಂದಿದ್ದ ಬ್ರಿಟೀಷ್ ನಟಿಗೆ ಕೋವಿಡ್ ಸೋಂಕು ದೃಢ!

ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಬ್ರಿಟನ್ ನಿಂದ ಭಾರತಕ್ಕೆ ಆಗಮಿಸಿದ್ದ ಬ್ರಿಟೀಷ್ ನಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

Published: 05th January 2021 11:27 AM  |   Last Updated: 05th January 2021 12:42 PM   |  A+A-


Banita Sandhu

ನಟಿ ಬನಿತಾ ಸಂಧು

Posted By : Srinivasamurthy VN
Source : Online Desk

ಕೋಲ್ಕತ್ತಾ: ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಬ್ರಿಟನ್ ನಿಂದ ಭಾರತಕ್ಕೆ ಆಗಮಿಸಿದ್ದ ಬ್ರಿಟೀಷ್ ನಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಬ್ರಿಟಿಷ್ ನಟಿ ಬನಿತಾ ಸಂಧು ಅವರಿಗೆ ಸೋಮವಾರ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಚಲನಚಿತ್ರವೊಂದರ ಚಿತ್ರೀಕರಣಕ್ಕಾಗಿ ಬನಿತಾ ಸಂಧು ಭಾರತಕ್ಕೆ ಆಗಮಿಸಿದ್ದರು. ಪ್ರಸ್ತುತ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮೂಲಗಳ ಪ್ರಕಾರ 'ಕವಿತಾ & ತೆರೇಸಾ' ಚಿತ್ರದ ಚಿತ್ರೀಕರಣಕ್ಕಾಗಿ ಸಂಧು ಅವರು ಡಿಸೆಂಬರ್ 20ರಂದು ಕೋಲ್ಕತಾಗೆ ಆಗಮಿಸಿದ್ದರು. ವಿಮಾನದಲ್ಲಿ ಇಂಗ್ಲೆಂಡ್‌ನಿಂದ ಬರುವಾಗ ರೂಪಾಂತರ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದ್ದ ಯುವಕರೊಂದಿಗೇ ಅದೇ ವಿಮಾನದಲ್ಲಿ ಪ್ರಯಾಣಿಸಿದ್ದರು. ಹೀಗಾಗಿ ಸೋಮವಾರ ಅವರನ್ನು ವಿಮಾನ ನಿಲ್ದಾಣದಲ್ಲಿಯೇ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಆಕೆಗೆ ಕೋವಿಡ್-19 ತಗುಲಿರುವುದು ಪತ್ತೆಯಾಗಿದ್ದು, ರೂಪಾಂತರ ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಮಾದರಿಯನ್ನು ಪರೀಕ್ಷೆಗೆ ರವಾನಿಸಿದ್ದಾರೆ. 

ಇನ್ನು ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ನಟಿಯನ್ನು ಆರಂಭದಲ್ಲಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲು ಅಧಿಕಾರಿಗಳು ಮುಂದಾಗಿದ್ದರು. ಇಂಗ್ಲೆಂಡ್‌ನಿಂದ ಹಿಂದಿರುಗಿದವರನ್ನು ಇರಿಸಿಕೊಳ್ಳಲು ಸ್ಥಾಪಿಸಿರುವ ಬೆಲಿಯಾಘಾಟಾ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ 23 ವರ್ಷದ ಸಂಧು ಅವರನ್ನು ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಸರಿಯಾದ ಮೂಲಸೌಕರ್ಯಗಳಿಲ್ಲ ಎಂದು ಆರೋಪಿಸಿದ ಅವರು ಆಂಬುಲೆನ್ಸ್‌ನಿಂದ ಇಳಿಯಲು ನಿರಾಕರಿಸಿದರು.ಸಂಧು ಅವರಿಗೆ ಆಸ್ಪತ್ರೆಯ ಹಿರಿಯ ವೈದ್ಯರು ಹಲವಾರು ಬಾರಿ ಸಲಹೆ ನೀಡಿದರೂ ಕೂಡ ಅವರ ಪ್ರಯತ್ನ ವ್ಯರ್ಥವಾಯಿತು.

ಅಂತಿಮವಾಗಿ, ಆರೋಗ್ಯ ಇಲಾಖೆಯ ಅನುಮತಿಯೊಂದಿಗೆ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸಂಧು ಅವರನ್ನು ಅಲ್ಲಿ ಪ್ರತ್ಯೇಕ ಕ್ಯಾಬಿನ್‌ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಟಿಗೆ ರೂಪಾಂತರ ಕೊರೊನಾ ವೈರಸ್ ಸೋಂಕು ತಗುಲಿದೆಯೇ ಇಲ್ಲವೇ ಎನ್ನುವುದನ್ನು ಪರೀಕ್ಷಿಸಲು ಆಕೆಯ ಮಾದರಿಗಳನ್ನು ಕಲ್ಯಾಣಿಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬಯೋಮೆಡಿಕಲ್ ಜೀನೋಮಿಕ್ಸ್‌ಗೆ ಕಳುಹಿಸಲಿದ್ದೇವೆ. ಫಲಿತಾಂಶ ಲಭ್ಯವಾದ ಬಳಿಕ ಅಗತ್ಯವಾದ ನಿಯಮವನ್ನು ಅನುಸರಿಸುತ್ತೇವೆ' ಎಂದು ಅಧಿಕಾರಿ ತಿಳಿಸಿದ್ದಾರೆ.

ಇನ್ನು ನಟಿ ಸಂಧು ಈ ಹಿಂದೆ ಹಿಂದಿ ಸಿನಿಮಾ 'ಅಕ್ಟೋಬರ್' ನಲ್ಲಿ ವರುಣ್ ಧವನ್ ಜೊತೆ ನಟಿಸಿದ್ದರು.

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp