ಮಹಿಳೆ ಅತ್ಯಾಚಾರ, ಕೊಲೆ: ಗೋವಾದಲ್ಲಿ ಬೆಂಗಳೂರು ವ್ಯಕ್ತಿ ಬಂಧನ

ಪರಿಚಯಸ್ಥ ಮಹಿಳೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿ, ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.

Published: 06th January 2021 10:12 AM  |   Last Updated: 06th January 2021 12:43 PM   |  A+A-


Crime Branch of Goa Police arrested a rape and murder accused.

ಕೊಲೆ ಆರೋಪಿ

Posted By : Manjula VN
Source : ANI

ಪಣಜಿ: ಪರಿಚಯಸ್ಥ ಮಹಿಳೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿ, ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ.

ಕಾಮಾಕ್ಷಿಪಾಳ್ಯದ ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಬಂಧಿತ ಆರೋಪಿ.

ಪ್ರಿಂಟಿಂಗ್‌ ಪ್ರೆಸ್‌ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಆ ಬಗ್ಗೆ ಅವರ ಪತಿ ಮಾಗಡಿ ರಸ್ತೆ ಠಾಣೆಗೆ ದೂರು ನೀಡಿದ್ದರು'

ಇದರ ಬೆನ್ನಲ್ಲೇ ನಿನ್ನೆ ಕಾಮಾಕ್ಷಿ ಪಾಳ್ಯದ ಆರೋಪಿ ಪ್ರವೀಣ್ ಮನೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಕೃತ್ಯ ವೆಸಗಿದ್ದ ಪ್ರವೀಣ್ ಗೋವಾಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದು ಆತನ‌ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿತ್ತು‌.

ಗೋವಾದಲ್ಲಿದ್ದ ತಲೆಮರೆಸಿಕೊಂಡಿದ್ದ ಆತನನ್ನು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ಅಲ್ಲಿನ‌ ಪೊಲೀಸರ ನೆರವಿನೊಂದಿಗೆ ಬಂಧಿಸಿ ನಗರಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದೆ. 

ಆರೋಪಿ ಹಾಗೂ ಮಹಿಳೆ, ಹಲವು ವರ್ಷಗಳಿಂದ ಪರಿಚಯವಿದ್ದರು ಎಂಬುದು ಗೊತ್ತಾಗಿದೆ. ಸೋಮವಾರವೂ ಲೈಂಗಿಕ ಕ್ರಿಯೆ ನಡೆಸುವ ವೇಳೆಯಲ್ಲೇ ಪ್ರಜ್ಞೆ ಕಳೆದುಕೊಂಡು ಮಹಿಳೆ ಮೃತಪಟ್ಟಿರುವ ಶಂಕೆಯೂ ಇದೆ. ಇತ್ತೀಚೆಗಷ್ಟೆ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲೂ ಇಂಥ ಘಟನೆ ನಡೆದಿರುವುದನ್ನು ಇಲ್ಲಿ ಸ್ಮರಿಸಬಹುದು.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp