ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ ಬಂಧನ: ಕಾಮಿಡಿಯನ್ ಫರುಖಿಗೆ ಜಾಮೀನು ನಿರಾಕರಣೆ

ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಮಾನ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸ್ಟಾಂಡ್ ಅಪ್ ಕಾಮಿಡಿಯನ್ ಮುನವರ್ ಫರುಖಿ ಮತ್ತು ಮತ್ತೊಬ್ಬರ ವಿರುದ್ಧ ಬಿಜೆಪಿ ಶಾಸಕರ ಪುತ್ರ ನೀಡಿದ್ದ ದೂರಿಗೆ ಸಂಬಂಧಪಟ್ಟಂತೆ ಇಲ್ಲಿನ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

Published: 06th January 2021 12:41 PM  |   Last Updated: 06th January 2021 12:58 PM   |  A+A-


Stand-up comedian Munawar Faruqui

ಕಾಮಿಡಿಯನ್ ಮುನವರ್ ಫರುಖಿ

Posted By : Sumana Upadhyaya
Source : PTI

ಇಂದೋರ್: ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಮಾನ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸ್ಟಾಂಡ್ ಅಪ್ ಕಾಮಿಡಿಯನ್ ಮುನವರ್ ಫರುಖಿ ಮತ್ತು ಮತ್ತೊಬ್ಬರ ವಿರುದ್ಧ ಬಿಜೆಪಿ ಶಾಸಕರ ಪುತ್ರ ನೀಡಿದ್ದ ದೂರಿಗೆ ಸಂಬಂಧಪಟ್ಟಂತೆ ಇಲ್ಲಿನ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಎರಡೂ ಕಡೆಯ ವಾದ-ವಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ಕೋರ್ಟ್ ನ್ಯಾಯಾಧೀಶ ಯತೀಂದ್ರ ಕುಮಾರ್ ಗುರು ಫರುಖಿ ಮತ್ತು ನಳೀನ್ ಯಾದವ್ ಅವರಿಗೆ ಜಾಮೀನು ನಿರಾಕರಿಸಿದೆ.

ಕಾಮಿಡಿಯನ್ ಯಾದವ್ ಮತ್ತು ಇತರ ಮೂವರಿಗೆ ಕಳೆದ 2ರಂದು ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಜಾಮೀನು ನಿರಾಕರಿಸಿದ್ದರು.

ಹಿಂದೂ ದೇವತೆಗಳು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಗುಜರಾತ್ ನ ನಿವಾಸಿ ಫರುಖಿ ಮತ್ತು ಇತರ ಮೂವರು ಕಳೆದ ಶನಿವಾರ ಬಂಧಿತರಾಗಿದ್ದರು. ಇವರು ಕಳೆದ 1ರಂದು ಹೊಸವರ್ಷ ಇಂದೋರ್ ನಲ್ಲಿ ನಡೆದ ಶೋವೊಂದರಲ್ಲಿ ಈ ರೀತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಂಧನಕ್ಕೊಳಗಾಗಿದ್ದರು.

ಬಿಜೆಪಿ ಶಾಸಕ ಮಳಿನ್ ಲಕ್ಷ್ಮಣ್ ಸಿಂಗ್ ಗೌರ್ ಅವರ ಪುತ್ರ ಏಕಲವ್ಯ ಸಿಂಗ್ ಗೌರ್ ದೂರು ನೀಡಿದ್ದರು.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp