
ಥಿಯೇಟರ್ 100% ಭರ್ತಿ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!
ಚೆನ್ನೈ: ಹೈಕೋರ್ಟ್ ಸೂಚನೆಯ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿ ಮಾಡಲು ಅವಕಾಶ ನೀಡಿರುವ ನಿರ್ಧಾರವನ್ನು ತಮಿಳುನಾಡು ಸರ್ಕಾರ ಹಿಂಪಡೆದಿದೆ.
ಪರಿಷ್ಕೃತ ಆದೇಶದಲ್ಲಿ ಶೇ.50 ರಷ್ಟು ಆಸನಗಳ ಭರ್ತಿಗೆ ಅಷ್ಟೇ ಅವಕಾಶ ನೀಡಬೇಕೆಂಬ ನಿಯಮವನ್ನು ವಿಧಿಸಲಾಗಿದೆ.
ಈ ಹಿಂದಿನ ಆದೇಶದಲ್ಲಿ ತಮಿಳುನಾಡು ಸರ್ಕಾರ ಆಸನಗಳ ಭರ್ತಿಯ ಅವಕಾಶವನ್ನು ಶೇ.50 ರಿಂದ ಶೇ.100ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಬದಲಾವಣೆ ಮಾಡುವಂತೆ ಜ.08 ರಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ.
ಶೇ.50 ರಷ್ಟು ಆಸನಗಳ ಭರ್ತಿಗೆ ಮಾತ್ರ ಅವಕಾಶ ನೀಡಿರುವ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾರ್ಗಸೂಚಿಗಳನ್ನು ಪಾಲಿಸುವಂತೆ ಆದೇಶ ನೀಡಿತ್ತು.