ಭಂಡಾರ ಆಸ್ಪತ್ರೆ ಅಗ್ನಿ ಅವಘಡ: ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಅಮಿತ್ ಶಾ

ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 10 ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ದುಃಖ ವ್ಯಕ್ತಪಡಿಸಿದ್ದಾರೆ.

Published: 09th January 2021 09:29 AM  |   Last Updated: 09th January 2021 12:39 PM   |  A+A-


massive fire at Maharashtra hospital

ಭಂಡಾರ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

Posted By : Srinivasamurthy VN
Source : ANI

ಮುಂಬೈ: ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ 10 ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಂಡಾರ ಆಸ್ಪತ್ರೆ ಅಗ್ನಿ ದುರಂತದಲ್ಲಿ ಆಮೂಲ್ಯ ಯುವ ಜೀವಗಳನ್ನು ಕಳೆದುಕೊಂಡಿದ್ದೇವೆ. ನಿಜಕ್ಕೂ ಹೃದಯ ಕಲುಕುವ ದುರಂತ ಇದು. ಮಕ್ಕಳ ಪೋಷಕರೊಂದಿಗೆ ನಾವಿದ್ದೇವೆ. ಅವರಿಗೆ ದುಃಖ ತಡೆಯುವ ಶಕ್ತಿಯನ್ನು ದೇವರು ನೀಡಲಿ. ಗಾಯಗೊಂಡ ಮಕ್ಕಳು ಮತ್ತು ಸಿಬ್ಬಂದಿ ಇತರರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಆಸ್ಪತ್ರೆ ಅಗ್ನಿ ದುರಂತದಿಂದಾಗಿ ಆದ ನೋವು ಪದಗಳನ್ನು ಮೀರಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರಿಗೆ ದೇವರು ನೋವು ತಡೆಯುವ ಧೈರ್ಯ ನೀಡಲಿ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp