ಕೊರೊನಾ ಲಸಿಕೆ ಹಂಚಿಕೆ: ಜ.11ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ಇಡೀ ವಿಶ್ವಕ್ಕೇ ಮಾರಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೊನಾ ವೈರಸ್'ಗೆ ಲಸಿಕೆ ನೀಡುವ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Published: 09th January 2021 11:05 AM  |   Last Updated: 09th January 2021 11:05 AM   |  A+A-


PM modi

ಪ್ರಧಾನಿ ಮೋದಿ

Posted By : Manjula VN
Source : Online Desk

ನವದೆಹಲಿ: ಇಡೀ ವಿಶ್ವಕ್ಕೇ ಮಾರಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೊನಾ ವೈರಸ್'ಗೆ ಲಸಿಕೆ ನೀಡುವ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೋವಿಡ್ – ಸೀರಮ್ ಇನ್‌ಸ್ಟಿಟ್ಯೂಟ್‌ನ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಎರಡು ಲಸಿಕೆಗಳನ್ನು ನಿರ್ಬಂಧಿತ ತುರ್ತು ಬಳಕೆಗೆ ದೇಶದ ಔಷಧ ನಿಯಂತ್ರಕ ಅನುಮೋದಿಸಿದ ಕೆಲ ದಿನಗಳ ನಂತರ ಲಸಿಕೆ ನೀಡಿಕೆಯ ಬಗ್ಗೆ ಮಹತ್ವದ ಸಭೆ ನಡೆಸಲಾಗುತ್ತಿದೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್‌ನಿಂದ ತಯಾರಿಸಲ್ಪಟ್ಟ ಕೋವಿಶೀಲ್ಡ್, ಶೇ 70ಕ್ಕಿಂತ ಅಧಿಕ ಪರಿಣಾಮಕಾರಿಯಾಗಿದೆ. ಕೊವಾಕ್ಸಿನ್ ಪ್ರಸ್ತುತ 3ನೇ ಹಂತದ ಪ್ರಯೋಗಗಳಲ್ಲಿದೆ. ಆದರೆ. ಇದು ಸುರಕ್ಷಿತವಾಗಿ ಮತ್ತು ದೃಢವಾಗಿ ರೋಗನಿರೋಧಕ ಪ್ರತಿಕ್ರಿಯೆ ನೀಡುತ್ತದೆ ಎಂದು ಔಷಧ ನಿಯಂತ್ರಕ ಕಳೆದ ವಾರವಷ್ಟೇ ಹೇಳಿತ್ತು.

ಈ ಎಲ್ಲಾ ಬೆಳವಣಿಗೆ ನಡುವೆ ಸೋಮವಾರ ಪ್ರಧಾನಿ ಮೋದಿಯವರು ಸಭೆ ನಡೆಸುವ ಹಿನ್ನೆಲೆಯಲ್ಲಿ ಲಸಿಕೆ ಕುರಿತಂತೆ ಯಾವೆಲ್ಲಾ ನಿರ್ಧಾರಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಳ್ಳಲಿವೆ ಎಂಬುದನ್ನು ಕಾದು ನೋಡಬೇಕಿದೆ. 

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp