ಹರಿಯಾಣ: ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ರೈತರ ಮೇಲೆ ಅಶ್ರುವಾಯು, ಲಾಠಿ ಪ್ರಯೋಗಿಸಿದ ಪೊಲೀಸರು! ವಿಡಿಯೋ

 ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಭೇಟಿ ಹಿನ್ನೆಲೆಯಲ್ಲಿ ಹರಿಯಾಣದ ಕರ್ನಲ್ ಟೋಲ್ ಪ್ಲಾಜಾ ಬಳಿ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. 

Published: 10th January 2021 01:45 PM  |   Last Updated: 10th January 2021 01:48 PM   |  A+A-


Cops_Use_Tear_Gas1

ರೈತರ ಮೇಲೆ ಅಶ್ರುವಾಯು ಪ್ರಯೋಗಿಸುತ್ತಿರುವ ಪೊಲೀಸರು

Posted By : Nagaraja AB
Source : ANI

ಚಂಢೀಘಡ: ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಭೇಟಿ ಹಿನ್ನೆಲೆಯಲ್ಲಿ ಹರಿಯಾಣದ ಕರ್ನಲ್ ಟೋಲ್ ಪ್ಲಾಜಾ ಬಳಿ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. 

ಕೆಮಲಾ ಹಳ್ಳಿಗೆ ಬರಲು ಪ್ರಯತ್ನಿಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು, ಜಲ ಫಿರಂಗಿ ಪ್ರಯೋಗಿಸಿರುವ ದೃಶ್ಯಾವಳಿಗಳು ಮೊಬೈಲ್ ಗಳಲ್ಲಿ ಸೆರೆಯಾಗಿದೆ.

ನೂರಾರು ಸಂಖ್ಯೆಯಲ್ಲಿದ್ದ ರೈತರು, ಕೃಷಿ ಕಾನೂನುಗಳನ್ನು ರದ್ದುಪಡಿಸಿ ಎಂಬ ಘೋಷಣೆ ಕೂಗುತ್ತಾ, ಮೆರವಣಿಗೆ ಆರಂಭಿಸಿದಾಗ ಪೊಲೀಸರು ಆಶ್ರುವಾಯು ಸಿಡಿಸಿ ಗುಂಪನ್ನು ಚದುರಿಸಿದ್ದಾರೆ. ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಲಾಠಿ ಪ್ರಯೋಗಿಸಿದ್ದಾರೆ. 

 ಕೆಮಲಾ ಹಳ್ಳಿಯಲ್ಲಿ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳ ಪ್ರಯೋಜನಗಳ ಬಗ್ಗೆ ರೈತರನ್ನುದ್ದೇಶಿಸಿ ಮುಖ್ಯಮಂತ್ರಿ ಮಾತನಾಡಬೇಕಿತ್ತು. ಆದರೆ, ಮುಖ್ಯಮಂತ್ರಿ ಭೇಟಿ ರದ್ದಾಗುವ ಸಾಧ್ಯತೆಯಿರುವುದಾಗಿ ಮೂಲಗಳು ತಿಳಿಸಿವೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp