ಕೊರೋನಾ ಪರಿಸ್ಥಿತಿ, ಲಸಿಕೆ ಬಿಡುಗಡೆ ಕುರಿತು ಸಿಎಂಗಳ ಸಭೆ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ

ಭಾರತ ಅತಿ ದೊಡ್ಡ ಲಸಿಕೆ ವಿತರಣೆ ಅಭಿಯಾನಕ್ಕೆ ಸಜ್ಜುಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಲಸಿಕೆ ವಿತರಣೆ ಹಾಗೂ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಜ.11 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

Published: 10th January 2021 04:27 PM  |   Last Updated: 10th January 2021 04:27 PM   |  A+A-


PM_Modi1

ಪ್ರಧಾನಿ ನರೇಂದ್ರ ಮೋದಿ

Posted By : Srinivas Rao BV
Source : IANS

ನವದೆಹಲಿ: ಭಾರತ ಅತಿ ದೊಡ್ಡ ಲಸಿಕೆ ವಿತರಣೆ ಅಭಿಯಾನಕ್ಕೆ ಸಜ್ಜುಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಲಸಿಕೆ ವಿತರಣೆ ಹಾಗೂ ಕೋವಿಡ್-19 ಪರಿಸ್ಥಿತಿಯ ಬಗ್ಗೆ ಜ.11 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

ಸಂಜೆ 4 ಗಂಟೆಗೆ ವರ್ಚ್ಯುಯಲ್ ಸಭೆ ನಡೆಯಲಿದ್ದು, ಕೊರೋನಾ ಲಸಿಕೆ ಬಿಡುಗಡೆ ಬಗ್ಗೆ ಚರ್ಚಿಸಲಿದ್ದಾರೆ. 

ಸಭೆಯಲ್ಲಿ ಎಲ್ಲಾ ಮುಖ್ಯಮಂತ್ರಿಗಳು ಆಯಾ ರಾಜ್ಯಗಳಲ್ಲಿ ಲಸಿಕೆ ವಿತರಣೆಗೆ ನಡೆಸಿರುವ ಸಿದ್ಧತೆಗಳು ಹಾಗೂ ಇನ್ನಿತರ ಮಾಹಿತಿ ನೀಡಲಿದ್ದಾರೆ. 

ಜ.16 ರಿಂದ ಕೊರೋನಾ ವಿರುದ್ಧದ ಎರಡು ಲಸಿಕೆಗಳನ್ನು ಭಾರತ ತನ್ನ ಆದ್ಯತೆಯ, ಮುಂಚೂಣಿಯಲ್ಲಿರುವ ಕೊರೋನಾ ವಾರಿಯರ್ಸ್ ಗೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಿದೆ ಈ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ.

ಡಿಸಿಜಿಐ 2 ಕೊರೋನಾ ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಿದ ಬಳಿಕ ಪ್ರಧಾನಿ ಮೋದಿ ಸಿಎಂ ಗಳ ಜೊತೆ ನಡೆಸುತ್ತಿರುವ ಮೊದಲನೇ ಸಭೆ ಇದಾಗಿದೆ.

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp