ಟಿಎಂಸಿಯಿಂದ ಸಾಮೂಹಿಕ ನಿರ್ಗಮನಕ್ಕೆ ಕಾರಣವೇನು?: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ ನಾಯಕರ ಸಾಮೂಹಿಕ ನಿರ್ಗಮನಕ್ಕೆ ಕಾರಣವೇನೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಪ್ರಶ್ನಿಸಿದ್ದಾರೆ.

Published: 10th January 2021 11:01 PM  |   Last Updated: 10th January 2021 11:01 PM   |  A+A-


BJP chief JP Nadda (Photo | PTI)

ಜೆಪಿ ನಡ್ಡಾ

Posted By : Srinivas Rao BV
Source : The New Indian Express

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ ನಾಯಕರ ಸಾಮೂಹಿಕ ನಿರ್ಗಮನಕ್ಕೆ ಕಾರಣವೇನೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಪ್ರಶ್ನಿಸಿದ್ದಾರೆ.

ಪಕ್ಷದ ಪದಾಧಿಕಾರಿಗಳನ್ನು ಜೆಪಿ ನಡ್ಡಾ ಈ ರೀತಿ ಕೇಳಿದ್ದು, 2021 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಟಿಎಂಸಿಯಿಂದ ಬಿಜೆಪಿಗೆ ನಾಯಕರು ಸೇರ್ಪಡೆಯಾಗುತ್ತಿದ್ದಾರೆ ಎಂದು ಪದಾಧಿಕಾರಿಗಳು ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಜೆಪಿ ನಡ್ಡಾಗೆ ತಿಳಿಸಿದ್ದಾರೆ.

ಬಿಜೆಪಿಯಲ್ಲಿ ಅಧಿಕಾರದ ಆಸೆಯಿಂದಾಗಿ ಅಧಿಕಾರದಾಹಿಗಳು ಕೆಲವರು ಬಿಜೆಪಿಗೆ ಸೇರಲು ಬಯಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಜೆಪಿ ನಡ್ಡಾ ಹೇಳಿದ್ದಾರೆ.

ಟಿಎಂಸಿಯಿಂದ ಬರುತ್ತಿರುವ ನಾಯಕರನ್ನು ಪಕ್ಷಕ್ಕೆ ಸ್ವಾಗತಿಸುತ್ತಿರುವುದಕ್ಕೆ ಬಂಗಾಳದ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇತ್ತೀಚಿನ ದಿನಗಳಲ್ಲಿ ಮೂಲ ಬಿಜೆಪಿಗರು, ಹೊಸದಾಗಿ ಬಿಜೆಪಿ ಸೇರ್ಪಡೆಯಾಗಿರುವವರ ನಡುವೆ ಭಿನ್ನಾಭಿಪ್ರಾಯಗಳು ಈಗಾಗಲೇ ಪ್ರಾರಂಭವಾಗಿದೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp