49ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಸಿಂಘು ಗಡಿಯಲ್ಲಿ ತಾತ್ಕಾಲಿಕ ಗುರುದ್ವಾರ ನಿರ್ಮಾಣ

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ ಬುಧವಾರ 49 ನೇ ದಿನಕ್ಕೆ ಕಾಲಿಟ್ಟಿದೆ.

Published: 13th January 2021 06:02 PM  |   Last Updated: 13th January 2021 06:03 PM   |  A+A-


FARMERS-12

ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

Posted By : Lingaraj Badiger
Source : ANI

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ ಬುಧವಾರ 49 ನೇ ದಿನಕ್ಕೆ ಕಾಲಿಟ್ಟಿದೆ.

ರೈತರು ತಾವು ಪ್ರತಿಭಟನಾ ನಡೆಸುತ್ತಿರುವ ಸಿಂಘು ಗಡಿಯಲ್ಲಿಯೇ ತಾತ್ಕಾಲಿಕ ಗುರುದ್ವಾರ ನಿರ್ಮಾಣ ಮಾಡಿದ್ದಾರೆ.

ಆರು ದಿನಗಳ ಕಾಲ ಪ್ರಾರ್ಥನೆ ಸಲ್ಲಿಸಲು ಗುರುದ್ವಾರವನ್ನು ನಿರ್ಮಿಸಲಾಗಿದೆ. ಹಲವು ರೈತರು ಪ್ರತಿಭಟನೆಯ ಸಮಯದಲ್ಲಿ ಪ್ರಾಣ ಕಳೆದುಕೊಂಡ ರೈತರ ಆತ್ಮಕ್ಕೆ ಶಾಂತಿ ಕೋರಿ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ಎಂದು ಗುರುದ್ವಾರ ಸದಸ್ಯ ಚರಣಜೀತ್ ಸಿಂಗ್ ಅವರು ಹೇಳಿದ್ದಾರೆ.

"ಪ್ರತಿಭಟನೆ ವೇಳೆ ಮೃತಪಟ್ಟ ರೈತರನ್ನು ಗೌರವಿಸಲು 'ಅಖಂಡ್ ಮಾರ್ಗ'(ಧಾರ್ಮಿಕ ಪೂಜೆ) ಮಾಡುತ್ತಿದ್ದೇವೆ. ಸುಮಾರು ಆರು ದಿನಗಳ ಕಾಲ ಇದು ನಡೆಯಲಿದೆ. ಜನರು ಇಲ್ಲಿ ಪ್ರಾರ್ಥನೆ ಮುಂದುವರಿಸಬಹುದು" ಎಂದು ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp