ಕೋವಿಡ್-19: ದೇಶದಲ್ಲಿಂದು 15,968 ಹೊಸ ಕೇಸ್ ಪತ್ತೆ, 202 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,968  ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,04,95,147ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Published: 13th January 2021 09:48 AM  |   Last Updated: 13th January 2021 09:48 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,968  ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,04,95,147ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಒಂದೇ ದಿನ ಮಹಾಮಾರಿ ವೈರಸ್ 202 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,51,529ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,04,95,147 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 17,817  ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,01,29,111 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,14,507 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 8,36,227 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,34,89,114  ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp