ಮಧ್ಯ ಪ್ರದೇಶ ಕಳ್ಳಭಟ್ಟಿ ಪ್ರಕರಣ: ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮೊರೆನಾ ಕಲೆಕ್ಟರ್, ಎಸ್ಪಿ ತೆರವು

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿದ್ದ ಇನ್ನೂ ಆರು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

Published: 13th January 2021 03:17 PM  |   Last Updated: 13th January 2021 03:17 PM   |  A+A-


mp-hooch

ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು

Posted By : Lingaraj Badiger
Source : PTI

ಭೋಪಾಲ್: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿದ್ದ ಇನ್ನೂ ಆರು ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಇನ್ನು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರು ಮೊರೆನಾ ಕಲೆಕ್ಟರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಯನ್ನು ಹುದ್ದೆಯಿಂದ ತೆರವುಗೊಳಿಸುವಂತೆ ಆದೇಶಿಸಿದ್ದಾರೆ.

ಇಂದು ಮೊರೆನಾ ಘಟನೆ ಕುರಿತು ಪರಿಶೀಲನಾ ಸಭೆ ನಡೆಸಿದ ನಂತರ ಸಿಎಂ ಈ ಆದೇಶ ಹೊರಡಿಸಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅವರ ಬಂಧನಕ್ಕೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೊರೆನಾದಲ್ಲಿ ಗ್ರಾಮಸ್ಥರು ನಕಲಿ ಮದ್ಯ ಸೇವಿಸಿದ ನಂತರ ಇನ್ನೂ ಆರು ಜನರು ಸಾವನ್ನಪ್ಪಿದ್ದರಿಂದ ಸಾವಿನ ಸಂಖ್ಯೆ 20ಕ್ಕೆ ಏರಿಕೆ ಆಗಿದೆ ಎಂದು ಚಂಬಲ್ ಶ್ರೇಣಿಯ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ರಾಜೇಶ್ ಹಿಂಗಂಕರ್ ಪಿಟಿಐಗೆ ತಿಳಿಸಿದ್ದಾರೆ.

ಕಳ್ಳಭಟ್ಟಿ ಸೇವಿಸಿ ಅಸ್ವಸ್ಥಗೊಂಡಿದ್ದ ಇನ್ನೂ 21 ಮಂದಿ ಮೊರೆನಾ ಮತ್ತು ಗ್ವಾಲಿಯರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp