ಚೀನಾ ಜೊತೆ ಸಂಘರ್ಷ: ಎಚ್ಎಎಲ್ ನಿರ್ಮಿತ 83 ತೇಜಸ್ ಲಘು ಯುದ್ಧ ವಿಮಾನ ಖರೀದಿಗೆ ಕೇಂದ್ರ ಅಸ್ತು

ಭಾರತೀಯ ವಾಯುಪಡೆ(ಐಎಎಫ್)ಗೆ ಎಚ್ಎಎಲ್ ಅಭಿವೃದ್ಧಿಪಡಿಸಿರುವ 83 ಲಘು ಯುದ್ಧ ವಿಮಾನ 'ತೇಜಸ್' ಅನ್ನು 48,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

Published: 13th January 2021 06:52 PM  |   Last Updated: 13th January 2021 06:57 PM   |  A+A-


Tejas Fighter Jet

ಸಂಗ್ರಹ ಚಿತ್ರ

Posted By : Vishwanath S
Source : PTI

ನವದೆಹಲಿ: ಭಾರತೀಯ ವಾಯುಪಡೆ(ಐಎಎಫ್)ಗೆ ಎಚ್ಎಎಲ್ ಅಭಿವೃದ್ಧಿಪಡಿಸಿರುವ 83 ಲಘು ಯುದ್ಧ ವಿಮಾನ 'ತೇಜಸ್' ಅನ್ನು 48,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತಾ ಸಂಪುಟ ಸಮಿತಿ(ಸಿಸಿಎಸ್) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದಲ್ಲಿ ರಕ್ಷಣಾ ಉತ್ಪಾದನೆಯಲ್ಲಿ ಸ್ವಾವಲಂಬನೆಗಾಗಿ ಈ ಒಪ್ಪಂದವು 'ಗೇಮ್ ಚೇಂಜರ್' ಆಗಲಿದೆ. ಮುಂದಿನ ವರ್ಷಗಳಲ್ಲಿ ತೇಜಸ್ ಭಾರತೀಯ ವಾಯುಪಡೆಯ ಫೈಟರ್ ಫ್ಲೀಟ್‌ನ ಬೆನ್ನೆಲುಬಾಗಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಸುಮಾರು ಮೂರು ವರ್ಷಗಳ ಹಿಂದೆ, ಐಎಎಫ್ 83 ತೇಜಸ್ ವಿಮಾನಗಳನ್ನು ಖರೀದಿಸಲು ಆರಂಭಿಕ ಟೆಂಡರ್ ನೀಡಿತ್ತು. ತೇಜಸ್ ನಾಲ್ಕೂವರೆ ತಲೆಮಾರಿನ ಯುದ್ಧ ಜೆಟ್ ಆಗಿದೆ.

ವಿಮಾನ ತಯಾರಕ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್‌ಎಎಲ್) ಈಗಾಗಲೇ ನಾಸಿಕ್ ಮತ್ತು ಬೆಂಗಳೂರು ವಿಭಾಗಗಳಲ್ಲಿ ಎರಡನೇ ಸಾಲಿನ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.

ಈ ಐತಿಹಾಸಿಕ ನಿರ್ಧಾರಕ್ಕಾಗಿ ನಾನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ರಕ್ಷಣಾ ಸಚಿವರು ಹೇಳಿದರು.

ಇದರಲ್ಲಿ 73 ವಿಮಾನಗಳನ್ನು ಯುದ್ಧ ಸಮಯಗಳಲ್ಲಿ ಬಳಸಲಾಗುವುದು. ಇನ್ನುಳಿಂದ 10 ವಿಮಾನಗಳನ್ನು ತರಬೇತಿ ನೀಡಲು ಬಳಸಲಾಗುತ್ತದೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp