ಕೇಂದ್ರ ಸರ್ಕಾರಕ್ಕೆ ಆಗದಿದ್ದರೆ ನಾವು ದೆಹಲಿ ಜನತೆಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡುತ್ತೇವೆ: ಕೇಜ್ರಿವಾಲ್

ಕೇಂದ್ರ ಸರ್ಕಾರ ಕೈಯಲ್ಲಿ ಆಗದಿದ್ದರೆ ಆಮ್ ಆದ್ಮಿ ಪಕ್ಷ(ಎಎಪಿ) ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

Published: 13th January 2021 06:18 PM  |   Last Updated: 13th January 2021 07:00 PM   |  A+A-


Aravind kejriwal

ಅರವಿಂದ್ ಕೇಜ್ರಿವಾಲ್

Posted By : Vishwanath S
Source : PTI

ನವದೆಹಲಿ: ಕೇಂದ್ರ ಸರ್ಕಾರ ಕೈಯಲ್ಲಿ ಆಗದಿದ್ದರೆ ಆಮ್ ಆದ್ಮಿ ಪಕ್ಷ(ಎಎಪಿ) ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಜೀವ ಉಳಿಸುವ ಲಸಿಕೆ ಪಡೆಯಲು ಸಾಧ್ಯವಾಗದ ಅನೇಕ ಜನರಿದ್ದಾರೆ. ಹೀಗಾಗಿ ದೇಶದಲ್ಲಿ ಉಚಿತ ವ್ಯಾಕ್ಸಿನೇಷನ್ ಮಾಡಬೇಕೆಂದು ಈಗಾಗಲೇ ಕೇಂದ್ರಕ್ಕೆ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿರುವುದಾಗಿ ಹೇಳಿದ್ದಾರೆ. 

"ಕೇಂದ್ರವು ಏನು ಮಾಡುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಅಗತ್ಯವಿದ್ದರೆ, ಕೇಂದ್ರವು ಲಸಿಕೆಯನ್ನು ಉಚಿತವಾಗಿ ನೀಡದಿದ್ದರೆ, ನಾವು ಲಸಿಕೆಯನ್ನು ದೆಹಲಿ ಜನರಿಗೆ ಉಚಿತವಾಗಿ ಲಭ್ಯವಾಗುವಂತೆ ಮಾಡುತ್ತೇವೆ ಎಂದು ಕೇಜ್ರಿವಾಲ್ ತಿಳಿಸಿದರು.

"ಕೇಂದ್ರ ಮತ್ತು ನಮ್ಮ ವಿಜ್ಞಾನಿಗಳು ಎಲ್ಲಾ ಮಾರ್ಗಸೂಚಿ ಮತ್ತು ಸುರಕ್ಷತೆಗಳನ್ನು ಅನುಸರಿಸಿ ಲಸಿಕೆ ತಂದಿದ್ದಾರೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಆದ್ದರಿಂದ, ಯಾವುದೇ ಅನುಮಾನ ಇರಬಾರದು ಮತ್ತು ವ್ಯಾಕ್ಸಿನೇಷನ್ ಮಾಡಿಸಿಕೊಳ್ಳಲು ಜನರು ಮುಂದೆ ಬರಬೇಕು. ಲಸಿಕೆ ಬಗ್ಗೆ ವದಂತಿಗಳನ್ನು ಹರಡದಂತೆ ಮುಖ್ಯಮಂತ್ರಿ ಮನವಿ ಮಾಡಿದರು.

ಲಸಿಕೆಯನ್ನು ಮೊದಲು ಆರೋಗ್ಯ ಮತ್ತು ಮುಂಚೂಣಿ ಕಾರ್ಮಿಕರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಇದು ವೈರಸ್ ಮತ್ತು ಕಳೆದ ಒಂದು ವರ್ಷದಿಂದ ಜನರು ಅನುಭವಿಸಿದ ಕಷ್ಟಗಳಿಗೆ ಪರಿಹಾರ ನೀಡುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಶನಿವಾರದಿಂದ ದೆಹಲಿಯಲ್ಲಿ 89 ಕೇಂದ್ರಗಳಲ್ಲಿ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾಗಲಿದೆ.

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp