ಉತ್ತರ ಪ್ರದೇಶ: ಮಹಿಳಾ ಪೊಲೀಸ್ ಪೇದೆ ಮೇಲೆ ಸಹೋದ್ಯೋಗಿ ಪೊಲೀಸನಿಂದಲೇ ಅತ್ಯಾಚಾರ!

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಮಹಿಳಾ ಪೊಲೀಸ್ ಪೇದೆಯೊಬ್ಬರು ತನ್ನ ಮೇಲೆ ಸಹೋದ್ಯೋಗಿ ಕಾನ್‌ಸ್ಟೆಬಲ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವುದಾಗಿ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

Published: 13th January 2021 06:53 PM  |   Last Updated: 13th January 2021 06:53 PM   |  A+A-


Eight-year-old raped, killed in outskirts of Vrindavan in UP

ಸಾಂದರ್ಭಿಕ ಚಿತ್ರ

Posted By : Lingaraj Badiger
Source : PTI

ಗೊಂಡಾ: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಮಹಿಳಾ ಪೊಲೀಸ್ ಪೇದೆಯೊಬ್ಬರು ತನ್ನ ಮೇಲೆ ಸಹೋದ್ಯೋಗಿ ಕಾನ್‌ಸ್ಟೆಬಲ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವುದಾಗಿ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಈ ಸಂಬಂಧ ಮಂಗಳವಾರ ರಾತ್ರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕಾನ್‌ಸ್ಟೆಬಲ್ ಒಬ್ಬರು ತನ್ನ ಕೋಣೆಯನ್ನು ತೋರಿಸುವ ನೆಪದಲ್ಲಿ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಹಿಳಾ ಪೊಲೀಸ್ ಪೇದೆ ಆರೋಪಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ಅವರು ತಿಳಿಸಿದ್ದಾರೆ.

ತನ್ನ ಕೃತ್ಯದ ಬಗ್ಗೆ ಬಾಯಿ ಬಿಟ್ಟರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಾನ್‌ಸ್ಟೆಬಲ್ ಬೆದರಿಕೆ ಹಾಕಿರುವುದಾಗಿ ಮಹಿಳೆ ಆರೋಪಿಸಿದ್ದಾಳೆ.

ಮಹಿಳಾ ಪೊಲೀಸ್ ಪೇದೆಯ ದೂರಿನ ಆಧಾರದ ಮೇಲೆ ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತಪ್ಪಿಸಿಕೊಂಡಿರುವ ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಮಹಿಳಾ ಕಾನ್‌ಸ್ಟೆಬಲ್‌ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪಾಂಡೆ ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp