9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

ಹದಿನಾಲ್ಕು ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ಸಂಬಂಧಿ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

Published: 14th January 2021 08:32 PM  |   Last Updated: 14th January 2021 08:32 PM   |  A+A-


gang rape

ಗ್ಯಾಂಗ್ ರೇಪ್

Posted By : Srinivas Rao BV
Source : UNI

ಗ್ವಾಲಿಯರ್: ಹದಿನಾಲ್ಕು ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ಸಂಬಂಧಿ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ದಾರುಣ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

ಮಂಗಳವಾರ ರಾತ್ರಿ 8.30ರ ಸುಮಾರಿಗೆ ಹಾಲು ತರಲು ಬಾಲಕಿ ಅಂಗಡಿಗೆ ಹೋಗಿದ್ದಾರೆ. ಹಾಲು ಖರೀದಿಸಿ ಮನೆಗೆ ಬರುತ್ತಿದ್ದಾಗ ಮೂವರು ಆರೋಪಿಗಳು ಆಕೆಯನ್ನು ಸಮೀಪದ ಉದ್ಯಾನವನಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಳಿಕ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಸದಸ್ಯರು ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆತ್ಮರಾಮ್ ಶರ್ಮಾ ತಿಳಿಸಿದ್ದಾರೆ.

ಬಾಲಕಿ 9ನೆ ತರಗತಿಯಲ್ಲಿ ಕಲಿಯುತ್ತಿದ್ದು, ಅತ್ಯಾಚಾರವೆಸಗಿದ  ಆರೋಪಿಗಳಲ್ಲಿ ಓರ್ವ ಆಕೆಯ ಸಂಬಂಧಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp