ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 16,946 ಹೊಸ ಸೋಂಕು ಪ್ರಕರಣ ದಾಖಲು
24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 16,946 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.05 ಕೋಟಿ ಗಡಿದಾಟಿದೆ.
Published: 14th January 2021 09:50 AM | Last Updated: 14th January 2021 09:50 AM | A+A A-

ಕೋವಿಡ್-19 ಪರೀಕ್ಷೆ
ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 16,946 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.05 ಕೋಟಿ ಗಡಿದಾಟಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 16,946 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,05,12,093ಕ್ಕೆ ಏರಿಕೆಯಾಗಿದೆ. ಇನ್ನು ನಿನ್ನೆ ದೇಶಾದ್ಯಂತ 20,923 ಸೋಂಕಿತರು ಗುಣಮುಖರಾಗಿದ್ದು. ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟಾರೆ ಸಂಖ್ಯೆ 1,01,46,763ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ2,13,603 ಸಕ್ರಿಯ ಪ್ರಕರಣಗಳು ಮಾತ್ರ ಇವೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 198ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾಗೆ ಬಲಿಯಾದ ಸೋಂಕಿತರ ಸಂಖ್ಯೆ 1,51,727ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
24 ಗಂಟೆಗಳಲ್ಲಿ 7,43,191 ಕೋವಿಡ್-19 ಪರೀಕ್ಷೆ: ಐಸಿಎಂಆರ್
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 7,43,191 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜ.2ರವರೆಗೂ 18,42,32,305ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.
India reports 16,946 new #COVID19 cases, 17,652 discharges and 198 deaths in last 24 hours, as per Union Health Ministry
— ANI (@ANI) January 14, 2021
Total cases: 1,05,12,093
Active cases: 2,13,603
Total discharges: 1,01,46,763
Death toll: 1,51,727 pic.twitter.com/dJSXeRAJC1
A total of 18,42,32,305 samples tested for #COVID19, up to 13th January of which 7,43,191 samples were tested yesterday: Indian Council of Medical Research (ICMR) pic.twitter.com/bpfRid5FJk
— ANI (@ANI) January 14, 2021