ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್

ಮಾದಕ ದ್ರವ್ಯ ಪ್ರಕರಣದಲ್ಲಿ ತಮ್ಮ ಸೋದರಳಿಯನನ್ನು ಬಂಧಿಸಿದ ನಂತರ ಪ್ರತಿಕ್ರಿಯಿಸಿರುವ ಮಹಾರಾಷ್ಚ್ರ  ಸಚಿವ ನವಾಬ್ ಮಲ್ಲಿಕ್, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ.

Published: 14th January 2021 01:13 PM  |   Last Updated: 14th January 2021 01:13 PM   |  A+A-


Navab mallik

ನವಾಬ್ ಮಲ್ಲಿಕ್

Posted By : Shilpa D
Source : PTI

ಮುಂಬಯಿ: ಮಾದಕ ದ್ರವ್ಯ ಪ್ರಕರಣದಲ್ಲಿ ತಮ್ಮ ಸೋದರಳಿಯನನ್ನು ಬಂಧಿಸಿದ ನಂತರ ಪ್ರತಿಕ್ರಿಯಿಸಿರುವ ಮಹಾರಾಷ್ಚ್ರ  ಸಚಿವ ನವಾಬ್ ಮಲ್ಲಿಕ್, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ನವಾಬ್ ಮಲ್ಲಿಕ್, ಯಾವುದೇ ಘಟನೆ ಉಲ್ಲೇಖಿಸದೆ, ಕಾನೂನಿನಲ್ಲಿ ಯಾವುದೇ ತಾರತಮ್ಯವಿಲ್ಲ, ನ್ಯಾಯ ಎಲ್ಲರಿಗೂ ಒಂದೇ, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನವಾಬ್ ಮಲ್ಲಿಕ್ ಅವರ ಅಳಿಯ ಸಮೀರ್ ಖಾನ್ ಅವರನ್ನು ಎನ್ ಸಿಬಿ ತಂಡ ಬುಧವಾರ ಬಂಧಿಸಿದೆ.

ಕಳೆದ ವಾರ ಬ್ರಿಟಿಷ್ ರಾಷ್ಟ್ರೀಯ ಕರಣ್ ಸಜ್ನಾನಿ ಮತ್ತು ಇನ್ನಿಬ್ಬರನ್ನು ಬಂಧಿಸಿದ ಡ್ರಗ್ಸ್ ಪ್ರಕರಣದ ಆರೋಪಿ ಮತ್ತು ಓರ್ವ ವ್ಯಕ್ತಿಯ ನಡುವೆ 20,000 ರೂ.ಗಳ ಆನ್‌ಲೈನ್ ವಹಿವಾಟು ಕಂಡುಬಂದ ಹಿನ್ನೆಲೆಯಲ್ಲಿ ಸಮೀರ್ ಖಾನ್ ಅವರನ್ನು ಎನ್‌ಸಿಬಿ  ವಿಚಾರಣೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ನಮ್ಮ ನ್ಯಾಯಾಂಗ ವ್ಯವಸ್ಥೆ ಮೇಲೆ ಸಂಪೂರ್ಣ ನಂಬಿಕೆಯಿದೆ ಎಂದು ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ನವಾಬ್ ಮಲ್ಲಿಕ್ ಟ್ವೀಟ್ ಮಾಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Yeddyurappa

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಕರ್ನಾಟಕ ಬಜೆಟ್ 2021 ಕುರಿತು ನಿಮ್ಮ ಅಭಿಪ್ರಾಯ...


Result
ಸಮತೋಲಿತ ಬಜೆಟ್
ಗೊತ್ತುಗುರಿ ಇಲ್ಲದ ಬಜೆಟ್
flipboard facebook twitter whatsapp