ಅರ್ನಬ್‌ ಗೋಸ್ವಾಮಿ ವಿರುದ್ಧ ಜ. 29ರವರೆಗೆ ಯಾವುದೇ ಕ್ರಮವಿಲ್ಲ: ಹೈಕೋರ್ಟ್‌ಗೆ ಮುಂಬೈ ಪೊಲೀಸರ ಹೇಳಿಕೆ

ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಎಆರ್‌ಜಿ ಔಟ್‌ಲಿಯರ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಇತರ ನೌಕರರ ವಿರುದ್ಧ ಜನವರಿ 29ರವರೆಗೆ...

Published: 15th January 2021 07:45 PM  |   Last Updated: 15th January 2021 07:45 PM   |  A+A-


arnab

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ

Posted By : Lingaraj Badiger
Source : UNI

ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಎಆರ್‌ಜಿ ಔಟ್‌ಲಿಯರ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ಇತರ ನೌಕರರ ವಿರುದ್ಧ ಜನವರಿ 29ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಮುಂಬೈ ಪೊಲೀಸರು ಶುಕ್ರವಾರ ಬಾಂಬೆ ಹೈಕೋರ್ಟ್‌ಗೆ ಭರವಸೆ ನೀಡಿದ್ದಾರೆ.

ಇದನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂದೆ ಮತ್ತು ಮನೀಶ್‌ ಪಾಟೀಲ್‌, ವಾರದಲ್ಲಿ ಎರಡು ದಿನಗಳಿಗಿಂತ ಹೆಚ್ಚು ಕಾಲ ಅವರನ್ನು ವಿಚಾರಣೆಗೆ ಕರೆಯುವಂತಿಲ್ಲ ಎಂದು ನಿರ್ದೇಶನ ನೀಡಿದೆ.

ಎಆರ್‌ಜಿ ಎಲ್ಲಾ ರಿಪಬ್ಲಿಕ್ ಟಿವಿ ಚಾನೆಲ್‌ಗಳನ್ನು ನಡೆಸುವ ಮೂಲ ಕಂಪನಿಯಾಗಿದೆ.

ಟಿಆರ್‌ಪಿ ಹಗರಣದ ತನಿಖೆಯ ಹೆಸರಿನಲ್ಲಿ ತನ್ನ ಉದ್ಯೋಗಿಗೆ ಕಿರುಕುಳ ನೀಡದಂತೆ ತಡೆಯಲು ಪೊಲೀಸರಿಗೆ ನಿರ್ದೇಶನ ಕೋರಿ ಗೋಸ್ವಾಮಿ ನೇತೃತ್ವದ ಕಂಪನಿ ಅರ್ಜಿ ಸಲ್ಲಿಸಿತ್ತು.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp