ರಾಷ್ಟ್ರೀಯ ಸೇನಾ ದಿನ: ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಪ್ರಮುಖ ನಾಯಕರಿಂದ ಸ್ಮರಣೆ, ಗೌರವ ಸಲ್ಲಿಕೆ 

ಜನವರಿ 15, ರಾಷ್ಟ್ರೀಯ ಸೇನಾ ದಿನ. ಇದರ ಅಂಗವಾಗಿ ಪ್ರಮುಖ ನಾಯಕರು ದೇಶದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಧೀರ ಯೋಧರನ್ನು ಸ್ಮರಿಸಿದ್ದಾರೆ. ನಮ್ಮ ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ.

Published: 15th January 2021 08:38 AM  |   Last Updated: 15th January 2021 11:35 AM   |  A+A-


Repreentational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : ANI

ನವದೆಹಲಿ: ಜನವರಿ 15, ರಾಷ್ಟ್ರೀಯ ಸೇನಾ ದಿನ. ಇದರ ಅಂಗವಾಗಿ ಪ್ರಮುಖ ನಾಯಕರು ದೇಶದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಧೀರ ಯೋಧರನ್ನು ಸ್ಮರಿಸಿದ್ದಾರೆ. ನಮ್ಮ ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ.

ಭಾರತೀಯ ಸೇನಾ ದಿನಾಚರಣೆಯಂದು ಗಣ್ಯರು ನಮ್ಮ ಯೋಧರ ತ್ಯಾಗ, ಬಲಿದಾನಗಳನ್ನು ಸ್ಮರಿಸಿದ್ದಾರೆ. ಸೇನಾ ದಿನದ ಅಂಗವಾಗಿ ಭಾರತೀಯ ಸೇನೆಯ ಪರಾಕ್ರಮಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗೆ ಅಭಿನಂದನೆಗಳು. ದೇಶದ ವಿಷಯ ಬಂದಾಗ ತಮ್ಮ ಜೀವವನ್ನು ಬದಿಗೊತ್ತಿ ತ್ಯಾಗ, ಬಲಿದಾನ ಮಾಡಿದವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳೋಣ. ಭಾರತ ಯಾವಾಗಲೂ ಸೈನಿಕರ ಧೈರ್ಯ, ಬದ್ಧತೆ, ನಿವೃತ್ತ ಯೋಧರು ಮತ್ತು ಅವರ ಕುಟುಂಬದ ಪರವಾಗಿರುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. 

ನಮ್ಮ ಭಾರತೀಯ ಸೇನೆ ಬಲಿಷ್ಠವಾಗಿದೆ. ಸೈನಿಕರು ಧೈರ್ಯಶಾಲಿಗಳಾಗಿದ್ದು ದೃಢ ನಿರ್ಧಾರ, ನಿಷ್ಠೆ, ಶ್ರದ್ಧೆ ಅವರಲ್ಲಿದೆ. ದೇಶಕ್ಕೆ ಹೆಮ್ಮೆ ತರುವ ಕೆಲಸವನ್ನು ಯಾವಾಗಲೂ ಮಾಡುತ್ತಾರೆ. ದೇಶವಾಸಿಗಳ ಪರವಾಗಿ ನಾನು ಭಾರತೀಯ ಸೇನೆಗೆ ಗೌರವ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಫೀಲ್ಡ್ ಮಾರ್ಷಲ್ ಕೊಡಾಂಡೇರಾ ಎಂ. ಕಾರಿಯಪ್ಪ ಅವರ (ಆಗಿನ ಲೆಫ್ಟಿನೆಂಟ್ ಜನರಲ್) ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ ಅಧಿಕಾರ ವಹಿಸಿಕೊಂಡಿದ್ದನ್ನು ಗುರುತಿಸಿ ಭಾರತದಲ್ಲಿ ಪ್ರತಿವರ್ಷ ಜನವರಿ 15 ರಂದು ಸೇನಾ ದಿನವನ್ನು ಆಚರಿಸಲಾಗುತ್ತದೆ. ಕೆ. ಎಂ.ಕಾರ್ಯಪ್ಪ ಅವರು ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಫ್ ಆಗಿ 15 ಜನವರಿ 1949 ರಂದು ಅಧಿಕಾರ ವಹಿಸಿಕೊಂಡರು.

ಈ ದಿನವನ್ನು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತು ರಾಜ್ಯಗಳ ಎಲ್ಲಾ ಪ್ರಧಾನ ಕಚೇರಿಗಳಲ್ಲಿ ಮೆರವಣಿಗೆಗಳು ಮತ್ತು ಇತರ ಮಿಲಿಟರಿ ಪ್ರದರ್ಶನಗಳ ರೂಪದಲ್ಲಿ ಆಚರಿಸಲಾಗುತ್ತದೆ. ಇಂದು ಭಾರತ ತನ್ನ 73 ನೇ ಭಾರತೀಯ ಸೇನಾ ದಿನವನ್ನು ಆಚರಿಸುತ್ತಿದೆ. ದೇಶ ಮತ್ತು ನಾಗರಿಕರನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಧೀರ ಸೈನಿಕರಿಗೆ ಗೌರವ ಸಲ್ಲಿಸಲು ಇಂದು ಪ್ರಮುಖ ದಿನವಾಗಿದೆ.

ಸೇನಾ ದಿನಾಚರಣೆ ದೇಶಾದ್ಯಂತ ನಡೆಯುತ್ತಿದ್ದರೆ, ದೆಹಲಿ ಕಂಟೋನ್ಮೆಂಟ್‌ನ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಮುಖ್ಯ ಸೇನಾ ದಿನದ ಮೆರವಣಿಗೆಯನ್ನು ನಡೆಸಲಾಗುತ್ತದೆ. ಶೌರ್ಯ ಪ್ರಶಸ್ತಿಗಳು ಮತ್ತು ಸೇನಾ ಪದಕಗಳನ್ನು ಸಹ ಈ ದಿನ ನೀಡಲಾಗುತ್ತದೆ. ಕಳೆದ ವರ್ಷ 15 ಸೈನಿಕರಿಗೆ ಶೌರ್ಯ ಪ್ರಶಸ್ತಿಗಳನ್ನು ನೀಡಲಾಯಿತು. ಪರಮ ವೀರ ಚಕ್ರ ಮತ್ತು ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತರು ಪ್ರತಿವರ್ಷ ಸೇನಾ ದಿನದ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp