ಪಂಜಾಬ್ ಗಡಿಯಲ್ಲಿ ಬಿಎಸ್ಎಫ್ ಯೋಧರಿಂದ ಓರ್ವ ಪಾಕ್ ನುಸುಳುಕೋರನ ಹತ್ಯೆ!

ಪಂಜಾಬ್ ರಾಜ್ಯದ ಗುರುದಾಸ್ಪುರ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಲ್ಲಿ ಓರ್ವ ನುಸುಳುಕೋರನನ್ನು ಗಡಿ ಭದ್ರತಾ ಪಡೆಗಳು (ಬಿಎಸ್ಎಫ್) ಗುರುವಾರ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 

Published: 15th January 2021 10:33 AM  |   Last Updated: 15th January 2021 12:38 PM   |  A+A-


file photo

ಸಂಗ್ರಹ ಚಿತ್ರ

Posted By : Manjula VN
Source : ANI

ಗುರುದಾಸ್ಪುರ: ಪಂಜಾಬ್ ರಾಜ್ಯದ ಗುರುದಾಸ್ಪುರ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಲ್ಲಿ ಓರ್ವ ನುಸುಳುಕೋರನನ್ನು ಗಡಿ ಭದ್ರತಾ ಪಡೆಗಳು (ಬಿಎಸ್ಎಫ್) ಗುರುವಾರ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 

ಭಾರತದ ಗಡಿ ಪ್ರದೇಶವಾಗಿರುವ ಬಾರ್ಡರ್ ಔಟ್ ಪೋಸ್ಟ್ (ಬಿಒಪಿ) ವಾಧಿಯಾ ಛೀಮಾ ಮತ್ತು ಕೊಟ್ರಾಜ್ಡಾದಲ್ಲಿ ಕಳೆದ ರಾತ್ರಿ ಅನುಮಾನಾಸ್ಪದ ಓಡಾಟಗಳು ಕಂಡು ಬಂದಿತ್ತು. 

ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಗಡಿ ನುಸುಳಲು ಯತ್ನಿಸುತ್ತಿದ್ದ ಓರ್ವ ಪಾಕ್ ನುಸುಳುಕೋರನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 


Stay up to date on all the latest ರಾಷ್ಟ್ರೀಯ news
Poll
lokasbha

ಸಂಸತ್ತಿನ ಕಲಾಪಗಳಿಗೆ ಅಡ್ಡಿಪಡಿಸುವ ಸಂಸದರಿಗೆ ದಂಡ ವಿಧಿಸಬೇಕೇ?


Result
ಹೌದು, ಇವರಿಂದ ಸಮಯ ವ್ಯರ್ಥ
ಬೇಡ, ಅವರು ಪ್ರತಿಭಟಿಸಬೇಕು
flipboard facebook twitter whatsapp