ಬಿಹಾರ ವಿಧಾನ ಪರಿಷತ್ ಚುನಾವಣೆ: ಶಹನವಾಜ್ ಹುಸೇನ್ ಬಿಜೆಪಿ ಅಭ್ಯರ್ಥಿ
ಬಿಹಾರ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಶನಿವಾರ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿಯ ರಾಷ್ಟ್ರೀಯ ವಕ್ತಾರ ಸೈಯದ್ ಶಹನಾವಾಜ್ ಹುಸೇನ್ ಅವರು ಕಣಕ್ಕಿಳಿಯಲಿದ್ದಾರೆ.
Published: 16th January 2021 07:05 PM | Last Updated: 16th January 2021 07:05 PM | A+A A-

ಶಹನವಾಜ್ ಹುಸೇನ್
ನವದೆಹಲಿ: ಬಿಹಾರ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಶನಿವಾರ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿಯ ರಾಷ್ಟ್ರೀಯ ವಕ್ತಾರ ಸೈಯದ್ ಶಹನಾವಾಜ್ ಹುಸೇನ್ ಅವರು ಕಣಕ್ಕಿಳಿಯಲಿದ್ದಾರೆ.
2014ರಲ್ಲಿ ಭಾಗಲ್ಪುರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಹುಸೇನ್ ಅವರು ಮತ್ತೆ ಚುನಾವಣಾ ರಾಜಕೀಯಕ್ಕೆ ಮರಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಖಾತೆ ಸಚಿವರಾಗಿದ್ದ ಹುಸೇನ್ ಅವರಿಗೆ 2019ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ.
ಇದೇ ವೇಳೆ ಉತ್ತರ ಪ್ರದೇಶ ವಿಧಾನ ಪರಿಷತ್ ಚುನಾವಣೆಗೆ ಮತ್ತೆ ಆರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ.
ಉತ್ತರ ಪ್ರದೇಶದಲ್ಲಿ ಕುನ್ವರ್ ಮನ್ವೇಂದ್ರ ಸಿಂಗ್, ಗೋವಿಂದ್ ನಾರಾಯಣ್ ಶುಕ್ಲಾ, ಸಲೀಲ್ ಬಿಷ್ಣೋಯ್, ಅಶ್ವಿನಿ ತ್ಯಾಗಿ, ಧರ್ಮವೀರ್ ಪ್ರಜಾಪತಿ ಮತ್ತು ಸುರೇಂದ್ರ ಚೌಧರಿ ಅವರಿಗೆ ಟಿಕೆಟ್ ನೀಡಲಾಗಿದೆ.