ಪಾಕ್ ಕದನ ವಿರಾಮ ಸಂದರ್ಭದಲ್ಲಿ ಜೀವ ಉಳಿಸಿದ್ದಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ಇಬ್ಬರು ಜಮ್ಮು ಪೊಲೀಸರು!
ಮಾರ್ಚ್ 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯ ಸಂದರ್ಭದಲ್ಲಿ ನಾಗರಿಕರ ಪ್ರಾಣ ಉಳಿಸಿದ್ದಕ್ಕಾಗಿ ಇಬ್ಬರು ಪೊಲೀಸರು 'ಜೀವ ರಕ್ಷಾ ಪದಕ' ಪ್ರಶಸ್ತಿ ಸ್ವೀಕರಿಸಿದ್ದಾರೆ.
Published: 16th January 2021 08:34 PM | Last Updated: 16th January 2021 08:34 PM | A+A A-

ಭಾರತೀಯ ಸೇನೆ
ಜಮ್ಮು: ಮಾರ್ಚ್ 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಕದನ ವಿರಾಮ ಉಲ್ಲಂಘನೆಯ ಸಂದರ್ಭದಲ್ಲಿ ನಾಗರಿಕರ ಪ್ರಾಣ ಉಳಿಸಿದ್ದಕ್ಕಾಗಿ ಇಬ್ಬರು ಪೊಲೀಸರು 'ಜೀವ ರಕ್ಷಾ ಪದಕ' ಪ್ರಶಸ್ತಿ ಸ್ವೀಕರಿಸಿದ್ದಾರೆ.
ಪೂಂಚ್ ಜಿಲ್ಲಾ ಪೊಲೀಸರ ಆಯ್ಕೆ ಗ್ರೇಡ್ ಕಾನ್ಸ್ಟೆಬಲ್ ಮಕ್ಸೂದ್ ಅಹ್ಮದ್ ಮತ್ತು ಆರನೇ ಬೆಟಾಲಿಯನ್ ಜಮ್ಮು ಮತ್ತು ಕಾಶ್ಮೀರ ಸಶಸ್ತ್ರ ಪೊಲೀಸ್(ಜೆಕೆಎಪಿ) ಝಾಕಿರ್ ಹುಸೇನ್ ಅವರಿಗೆ ಕೇಂದ್ರ ಗೃಹ ಸಚಿವಾಲಯ 'ಜೀವ ರಕ್ಷಾ ಪದಕ 2019' ನೀಡಿ ಗೌರವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂಂಚ್ನ ಜಿಲ್ಲಾಧಿಕಾರಿ ರಾಹುಲ್ ಯಾದವ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಕುಮಾರ್ ಆಂಗ್ರಾಲ್ ಅವರು ಪೂಂಚ್ನ ಡಾಕ್ ಬಂಗಲೆಯಲ್ಲಿ ನಡೆದ ಸಮಾರಂಭದಲ್ಲಿ ಪೊಲೀಸರಿಗೆ ಪ್ರಶಸ್ತಿಗಳನ್ನು ಹಸ್ತಾಂತರಿಸಿದರು.
ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಬಹುಮಾನ, ಪದಕ, ಪ್ರಮಾಣಪತ್ರ ಒಳಗೊಂಡಿದೆ ಎಂದು ಅವರು ಹೇಳಿದರು. ಈ ಸಮಾರಂಭದಲ್ಲಿ ಜಿಲ್ಲೆಯ ಇತರ ಹಿರಿಯ ನಾಗರಿಕರು ಮತ್ತು ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದು, ಪೊಲೀಸ್ ಸಿಬ್ಬಂದಿಯ ಪಾತ್ರವನ್ನು ಶ್ಲಾಘಿಸಿದರು.