ದಾವೋಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ, ಕ್ಸಿ - ಜಿನ್ ಪಿಂಗ್ ಭಾಗಿ
ಈ ತಿಂಗಳ ಕೊನೆಯಲ್ಲಿ ದಾವೋಸ್ ನಲ್ಲಿ ಆನ್ ಲೈನ್ ನಲ್ಲಿ ನಡೆಯಲಿರುವ ಐದು ದಿನಗಳ ವಿಶ್ವ ಆರ್ಥಿಕ ವೇದಿಕೆಯ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಪಾಲ್ಗೊಳ್ಳಲಿದ್ದಾರೆ.
Published: 18th January 2021 10:45 PM | Last Updated: 18th January 2021 10:45 PM | A+A A-

ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಈ ತಿಂಗಳ ಕೊನೆಯಲ್ಲಿ ದಾವೋಸ್ ನಲ್ಲಿ ಆನ್ ಲೈನ್ ನಲ್ಲಿ ನಡೆಯಲಿರುವ ಐದು ದಿನಗಳ ವಿಶ್ವ ಆರ್ಥಿಕ ವೇದಿಕೆಯ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಪಾಲ್ಗೊಳ್ಳಲಿದ್ದಾರೆ.
ನರೇಂದ್ರ ಸಿಂಗ್ ತೋಮರ್, ನಿತಿನ್ ಗಡ್ಕರಿ, ಸ್ಮೃತಿ ಇರಾನಿ, ಪಿಯೂಷ್ ಗೋಯೆಲ್ , ಧರ್ಮೇಂದ್ರ ಪ್ರಧಾನ್ ಸೇರಿದಂತೆ ಅನೇಕ ಸಚಿವರೊಂದಿಗೆ ಮುಕೇಶ್ ಅಂಬಾನಿ, ಆನಂದ್ ಮಹೀಂದ್ರ ಮತ್ತಿತರ ಉದ್ಯಮಿಗಳು ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಜನವರಿ 25ರಿಂದ 29ರವರೆಗೂ ನಡೆಯಲಿರುವ ದಾವೋಸ್ ಶೃಂಗಸಭೆಯಲ್ಲಿ ಅನೇಕ ರಾಷ್ಟ್ರಗಳ ಮುಖ್ಯಸ್ಥರು ಪಾಲ್ಗೊಳ್ಳಲಿದ್ದು, ವಿಶೇಷ ಭಾಷಣ ಮಾಡಲಿದ್ದಾರೆ ಅಲ್ಲದೇ, ಉದ್ಯಮ ವಲದ ಮುಖಂಡರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದಿಂದಾಗಿ ವಿಶ್ವದ ಬಹುತೇಕ ಎಲ್ಲಾ ರಾಷ್ಟ್ರಗಳು ಲಾಕ್ ಡೌನ್ ಆಗುವ ಮುನ್ನ ನಡೆದ ದಾವೋಸ್ ಶೃಂಗಸಭೆ 2020 ಕೊನೆಯ ಮಹತ್ವದ ಜಾಗತಿಕ ಕಾರ್ಯಕ್ರಮವಾಗಿತ್ತು.
ವಿಶೇಷ ಆರ್ಥಿಕ ಸಭೆಯ ಸಿದ್ದತೆಯನ್ನು ಆರಂಭಿಸಿರುವುದಾಗಿ ಜಿನಿವಾ ಮೂಲದ ಸಾರ್ವಜನಿಕ ಮತ್ತು ಖಾಸಗಿ ಸಹಕಾರದ ಅಂತಾರಾಷ್ಟ್ರೀಯ ಸಂಸ್ಥೆ ತಿಳಿಸಿದೆ.