ಕೃಷಿಯನ್ನು ನಾಶಮಾಡುವ ಕೃಷಿ ಕಾನೂನುಗಳನ್ನು ರದ್ದುಪಡಿಸುವುದೇ ರೈತರ ಸಮಸ್ಯೆಗೆ ಪರಿಹಾರ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರವನ್ನು "ನಾಶಮಾಡಲು" ಹೊಸ ಕೃಷಿ ಕಾನೂನುಗಳನ್ನು ವಿನ್ಯಾಸಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಆರೋಪಿಸಿದ್ದಾರೆ.

Published: 19th January 2021 04:02 PM  |   Last Updated: 19th January 2021 04:02 PM   |  A+A-


rahul-g1

ರಾಹುಲ್ ಗಾಂಧಿ

Posted By : Lingaraj Badiger
Source : PTI

ನವದೆಹಲಿ: ಕೇಂದ್ರ ಸರ್ಕಾರ ಕೃಷಿ ಕ್ಷೇತ್ರವನ್ನು "ನಾಶಮಾಡಲು" ಹೊಸ ಕೃಷಿ ಕಾನೂನುಗಳನ್ನು ವಿನ್ಯಾಸಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಆರೋಪಿಸಿದ್ದಾರೆ ಮತ್ತು ರೈತರ ಸಮಸ್ಯೆಗೆ ಏಕೈಕ ಪರಿಹಾರವೆಂದರೆ ಈ ಕಾನೂನುಗಳನ್ನು ರದ್ದುಪಡಿಸುವುದು ಎಂದು ಪ್ರತಿಪಾದಿಸಿದ್ದಾರೆ.

ರಾಹುಲ್ ಗಾಂಧಿ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ, ಕೇಂದ್ರದ ಮೂರು ಕೃಷಿ ಕಾನೂನುಗಳ ಹಿನ್ನೆಲೆಯಲ್ಲಿ ರೈತರ "ಅವಸ್ಥೆ"ಯನ್ನು ಎತ್ತಿ ತೋರಿಸುವ ಕಿರುಪುಸ್ತಕವನ್ನೂ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ರಾಹುಲ್ ಗಾಂಧಿ, ಈ ಕಾನೂನುಗಳು ಇಡೀ ಕೃಷಿ ಕ್ಷೇತ್ರವನ್ನು "ಮೂರರಿಂದ ನಾಲ್ಕು ಪ್ರಮುಖ ಬಂಡವಾಳಶಾಹಿಗಳ" ಕೈಗೆ ನೀಡುತ್ತವೆ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ಕೃಷಿ ಕ್ಷೇತ್ರವನ್ನು "ನಾಶಮಾಡಲು ವಿನ್ಯಾಸಗೊಳಿಸಲಾಗಿದೆ". "ನಾನು ಪ್ರತಿಭಟನಾ ನಿರತ ರೈತರನ್ನು ಶೇಕಡಾ 100 ರಷ್ಟು ಬೆಂಬಲಿಸುತ್ತೇನೆ ಮತ್ತು ದೇಶದ ಪ್ರತಿಯೊಬ್ಬ ವ್ಯಕ್ತಿಯು ನಮ್ಮ ಪರವಾಗಿ ಹೋರಾಡುತ್ತಿರುವ ರೈತರನ್ನು ಬೆಂಬಲಿಸಬೇಕು" ಎಂದು ಹೇಳಿದರು.

ಸರ್ಕಾರ ಮತ್ತು ಪ್ರತಿಭಟನಾಕಾರ ರೈತರ ನಡುವಿನ ಮಾತುಕತೆಗಳಲ್ಲಿನ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಈ ಮೂರು ಕಾನೂನುಗಳನ್ನು ರದ್ದುಗೊಳಿಸಬೇಕಾದ ಒಂದೇ ಒಂದು ಪರಿಹಾರವಿದೆ ಎಂದರು.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp