ಗುಜರಾತ್: ಪಾದಚಾರಿ ಮಾರ್ಗದ ಮೇಲೆ ಹರಿದ ಟ್ರಕ್, ಮಲಗಿದ್ದ 15 ಮಂದಿ ಕಾರ್ಮಿಕರ ದುರ್ಮರಣ

ಗುಜರಾತ್'ನ ಸೂರತ್ ನಗರದ ಕೊಸಂಬಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ವೊಂದು ಇದ್ದಕ್ಕಿದ್ದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದ್ದು, ಘಟನೆಯಲ್ಲಿ 15 ಮಂದಿ ಕಾರ್ಮಿಕರು ದುರ್ಮರಣವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

Published: 19th January 2021 07:50 AM  |   Last Updated: 19th January 2021 12:40 PM   |  A+A-


Visual from Surat's Kosamba

ಅಪಘಾತ ಸಂಭವಿಸಿರುವ ಸ್ಥಳ

Posted By : Manjula VN
Source : ANI

ಸೂರತ್: ಗುಜರಾತ್'ನ ಸೂರತ್ ನಗರದ ಕೊಸಂಬಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ವೊಂದು ಇದ್ದಕ್ಕಿದ್ದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದ್ದು, ಘಟನೆಯಲ್ಲಿ 15 ಮಂದಿ ಕಾರ್ಮಿಕರು ದುರ್ಮರಣವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

ಇಂದು ಬೆಳಗಿನ ಜಾವ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದ ಟ್ರಕ್ ಇದ್ದಕ್ಕಿದ್ದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ. 

ದುರ್ಘಟನೆ ಸಂಭವಿಸುವ ವೇಳೆ ಪಾದಚಾರಿ ಮಾರ್ಗದಲ್ಲಿ ಕಾರ್ಮಿಕರು ಮಲಗಿದ್ದರೆಂದು ಹೇಳಲಾಗುತ್ತಿದೆ. 

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸಾವನ್ನಪ್ಪಿದ್ದ ಎಲ್ಲರೂ ಕಾರ್ಮಿಕರಾಗಿದ್ದು, ರಾಜಸ್ಥಾನ ಮೂಲದವರಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ. 

ಪ್ರಧಾನಿ  ಮೋದಿ ತೀವ್ರ ಸಂತಾಪ

ದುರ್ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಸೂರತ್ ಟ್ರಕ್ ಅಪಘಾತದಲ್ಲಿ ಹಲವು ಜನರು ಸಾವನ್ನಪ್ಪಿರುವುದು ದುರಂತ. ಮೃತರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp