ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು ಅತ್ಯಂತ ಕಡಿಮೆ 10,064 ಹೊಸ ಕೇಸ್ ಪತ್ತೆ!

ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೋನಾ ವೈರಸ್ ಇಳಿಮುಖದ ಹಾದಿ ಭಾರತದಲ್ಲಿ ಮುಂದುವರೆದಿದ್ದು, ದೇಶದಲ್ಲಿಂದು ಅತ್ಯಂತ ಕನಿಷ್ಟ 10,064 ಪ್ರಕರಣಗಳು ಪತ್ತೆಯಾಗಿವೆ. 

Published: 19th January 2021 10:14 AM  |   Last Updated: 20th January 2021 08:13 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೋನಾ ವೈರಸ್ ಇಳಿಮುಖದ ಹಾದಿ ಭಾರತದಲ್ಲಿ ಮುಂದುವರೆದಿದ್ದು, ದೇಶದಲ್ಲಿಂದು ಅತ್ಯಂತ ಕನಿಷ್ಟ 10,064 ಪ್ರಕರಣಗಳು ಪತ್ತೆಯಾಗಿವೆ. 

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 10,064 ಹೊಸ ಕೇಸ್ ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,05,81,837ಕ್ಕೆ ಏರಿಕೆಯಾಗಿದೆ. 

ಈ ನಡುವೆ ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆ ಕಂಡು ಬಂದಿದ್ದು, ನಿನ್ನೆ ಕೇವಲ 137 ಮಂದಿ ಸಾವನ್ನಪ್ಪಿರುವುದು ವರದಿಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 1,52,556ಕ್ಕೆ ತಲುಪಿದೆ. 

ಇನ್ನು ಒಟ್ಟಾರೆ 1,05,81,837 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 17,411 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಈ ವರೆಗೂ ಬರೋಬ್ಬರಿ 1,02,28,753 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 

ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾವಿನ ಸಂಖ್ಯೆ ಕಡಿಮೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,00,528ಕ್ಕೆ ಇಳಿಕೆಯಾಗಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 7,09,791 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,78,02,827 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
Coronil tablets

ಕೋವಿಡ್-19 ವಿರುದ್ಧಪತಂಜಲಿಯ ಕೊರೋನಿಲ್ ಮಾತ್ರೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನೀವು ಭಾವಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp