ಗೌಪ್ಯತೆ ನೀತಿಯಲ್ಲಿನ ಬದಲಾವಣೆಗಳನ್ನು ಹಿಂಪಡೆಯಿರಿ: ವಾಟ್ಸಾಪ್‌ಗೆ ಭಾರತ ಸರ್ಕಾರ ಪತ್ರ

ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನ  ಗೌಪ್ಯತೆ ನೀತಿಯಲ್ಲಿ ಇತ್ತೀಚಿನ ಬದಲಾವಣೆಗಳನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರ ವಾಟ್ಸಾಪ್ ಗೆ ಪತ್ರ ಬರೆದಿದ್ದು  ಏಕಪಕ್ಷೀಯ ಬದಲಾವಣೆ ನ್ಯಾಯಯುತ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. 

Published: 19th January 2021 03:43 PM  |   Last Updated: 19th January 2021 03:55 PM   |  A+A-


ವಾಟ್ಸಾಪ್

Posted By : Raghavendra Adiga
Source : PTI

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ನ  ಗೌಪ್ಯತೆ ನೀತಿಯಲ್ಲಿ ಇತ್ತೀಚಿನ ಬದಲಾವಣೆಗಳನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರ ವಾಟ್ಸಾಪ್ ಗೆ ಪತ್ರ ಬರೆದಿದ್ದು  ಏಕಪಕ್ಷೀಯ ಬದಲಾವಣೆ ನ್ಯಾಯಯುತ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ವಾಟ್ಸಾಪ್ ಸಿಇಒ ವಿಲ್ ಕ್ಯಾಥ್‌ಕಾರ್ಟ್ ಗೆ ಬರೆದಿರುವ ಪತ್ರದಲ್ಲಿ, "ಜಾಗತಿಕವಾಗಿ ಭಾರತವು ವಾಟ್ಸಾಪ್‌ನ ಅತಿದೊಡ್ಡ ಬಳಕೆದಾರರ ನೆಲೆಯಾಗಿದೆ ಮತ್ತು ಅದರ ಸೇವೆಗಳಿಗೆ ದೊಡ್ಡ ಮಾರುಕಟ್ಟೆಯಾಗಿದೆ. ವಾಟ್ಸಾಪ್ ಸೇವಾ ನಿಯಮಗಳು ಮತ್ತು ಗೌಪ್ಯತೆ ನೀತಿಯಲ್ಲಿ ಪ್ರಸ್ತಾಪಿತ ಬದಲಾವಣೆಗಳು "ಭಾರತೀಯ ನಾಗರಿಕರ ಆಯ್ಕೆ ಮತ್ತು ಸ್ವಾಯತ್ತತೆ ಮೇಲೆ  ಗಂಭೀರ ಪರಿಣಾಮ ಬೀರಲಿದೆ ಎಂಬ ಕಳವಳವಿದೆ." ಎಂದು ವಿವರಿಸಲಾಗಿದೆ.

ಉದ್ದೇಶಿತ ಬದಲಾವಣೆಗಳನ್ನು ಹಿಂತೆಗೆದುಕೊಳ್ಳಲು ಮತ್ತು ಮಾಹಿತಿ ಗೌಪ್ಯತೆ, ಆಯ್ಕೆಯ ಸ್ವಾತಂತ್ರ್ಯ ಮತ್ತು ಡೇಟಾ ಸುರಕ್ಷತೆಗೆ ಅದರ ವಿಧಾನವನ್ನು ಮರುಪರಿಶೀಲಿಸುವಂತೆ ಸಚಿವಾಲಯ ವಾಟ್ಸಾಪ್ ಗೆ ಕೇಳಿದೆ.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp