ಕೇರಳ: 38 ಮಂದಿಯಿಂದ 17ರ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ, 44 ಪ್ರಕರಣ ದಾಖಲು, 20 ಮಂದಿ ಬಂಧನ

ಕೇರಳದಲ್ಲಿ ಮತ್ತೊಂದು ಭೀಕರ ಅತ್ಯಾಚಾರ ಪ್ರಕರಣ ಬಯಲಾಗಿದ್ದು, ಅಪ್ರಾಪ್ತ ಯುವತಿಯನ್ನು 38 ಮಂದಿ ಅತ್ಯಾಚಾರ ಮಾಡಿ ಲೈಂಗಿಕ ಶೋಷಣೆ ಮಾಡಿರುವ ಪ್ರಕರಣ ಆಪ್ತ ಸಮಾಲೋಚನೆ ವೇಳೆ ತಡವಾಗಿ ಬೆಳಕಿಗೆ ಬಂದಿದೆ.

Published: 19th January 2021 07:52 AM  |   Last Updated: 19th January 2021 12:41 PM   |  A+A-


raping minor girl

ಸಾಂದರ್ಭಿಕ ಚಿತ್ರ

Posted By : Srinivasamurthy VN
Source : ANI

ಮಲಪ್ಪುರಂ: ಕೇರಳದಲ್ಲಿ ಮತ್ತೊಂದು ಭೀಕರ ಅತ್ಯಾಚಾರ ಪ್ರಕರಣ ಬಯಲಾಗಿದ್ದು, ಅಪ್ರಾಪ್ತ ಯುವತಿಯನ್ನು 38 ಮಂದಿ ಅತ್ಯಾಚಾರ ಮಾಡಿ ಲೈಂಗಿಕ ಶೋಷಣೆ ಮಾಡಿರುವ ಪ್ರಕರಣ ಆಪ್ತ ಸಮಾಲೋಚನೆ ವೇಳೆ ತಡವಾಗಿ ಬೆಳಕಿಗೆ ಬಂದಿದೆ.

ಕೇರಳದ ಮಲಪ್ಪುರಂನ ನಿರ್ಭಯಾ ಕೇಂದ್ರದಲ್ಲಿ ನಡೆದ ಆಪ್ತ ಸಮಾಲೋಚನೆ ವೇಳೆ 17 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಯನ್ನು ಕಳೆದ ಕೆಲ ತಿಂಗಳುಗಳಿಂದ ನಿರಂತರವಾಗಿ ಅತ್ಯಾಚಾರ ಮಾಡಿ ತಮ್ಮ ಕಾಮತೃಷೆಗೆ ಬಳಸಿಕೊಳ್ಳಲಾಗಿದೆ. ಈ ಬಗ್ಗೆ ಸ್ವತಃ ಅತ್ಯಾಚಾರ ಸಂತ್ರಸ್ತೆಯೇ ಬೆಚ್ಚಿಬೀಳುವ ಸಂಗತಿಗಳನ್ನು ಬಹಿರಂಗಗೊಳಿಸಿದ್ದು. ಕಳೆದ ಕೆಲ ತಿಂಗಳಲ್ಲಿ ತಮ್ಮ ಮೇಲೆ 38 ಮಂದಿ ಪುರಷರು ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ನಡೆಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಸಂತ್ರಸ್ಥೆ ಹೇಳಿಕೊಂಡಿರುವಂತೆ 2016 ರಲ್ಲಿ, ಅಂದರೆ ತನಗೆ 13 ವರ್ಷವಾಗಿದ್ದಾಗ ಮೊದಲ ಬಾರಿಗೆ ಲೈಂಗಿಕ ದೌರ್ಜನ್ಯ ನಡೆದಿತ್ತು. ನಂತರ, ಒಂದೇ ವರ್ಷದಲ್ಲಿ ಮತ್ತೊಮ್ಮೆ ಇಂತಹ ಕೃತ್ಯ ಮರುಕಳಿಸಿದೆ. ಎರಡನೇ ಘಟನೆ ನಂತರ ಸಂತ್ರಸ್ತೆಯನ್ನು ಬಾಲಗೃಹಕ್ಕೆ ರವಾನಿಸಲಾಗಿತ್ತು. ನಂತರ, ಕಳೆದ ವರ್ಷ ತಾಯಿ ಮತ್ತು ಸಹೋದರನೊಂದಿಗೆ ಕಳುಹಿಸಿಕೊಡಲಾಗಿತ್ತು ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್‌ ಅಧಿಕಾರಿ ಮೊಹಮ್ಮದ್‌ ಹನೀಫಾ ಅವರು, ಸಂತ್ರಸ್ತೆ ವರ್ಷದ ಹಿಂದೆ ಬಾಲಗೃಹದಿಂದ ಬಿಡಗಡೆಯಾದ ನಂತರ ಕೆಲಕಾಲ ಕಾಣೆಯಾಗಿದ್ದರು. ನಂತರ, ಡಿಸೆಂಬರ್‌ನಲ್ಲಿ ಪಾಲಕ್ಕಾಡ್‌ನಲ್ಲಿ ಪತ್ತೆಯಾಗಿದ್ದರು. ಅಲ್ಲಿಂದ ನಿರ್ಭಯ ಕೇಂದ್ರಕ್ಕೆ ತರಲಾಗಿತ್ತು ಎಂದು  ಹೇಳಿದ್ದಾರೆ.

ಇನ್ನು ಸಂತ್ರಸ್ಥೆ ಕಾಣೆಯಾಗಿದ್ದಾಗ ತಾವು ಅನುಭವಿಸಿರುವ ಲೈಂಗಿಕ ಕಿರುಕುಳ, ಶೋಷಣೆಯ ಸರಣಿಯನ್ನು ನಿರ್ಭಯಾ ಕೇಂದ್ರದ ಅಧಿಕಾರಿಗಳ ಎದುರು ಸಂತ್ರಸ್ತೆ ವಿವರಿಸಿದ್ದು. 

44 ಮಂದಿಯ ವಿರುದ್ಧ 32 ಪ್ರಕರಣ ದಾಖಲು, 20 ಮಂದಿ ಬಂಧನ
ಇನ್ನು ಅತ್ಯಾಚಾರ ಮತ್ತು ಲೈಂಗಿಕ ಶೋಷಣೆಯಡಿಯಲ್ಲಿ ಪೊಲೀಸರು ಒಟ್ಟು 44 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಈ ಪೈಕಿ 20 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಪೊಲೀಸರು, ಬಹುತೇಕ ಎಲ್ಲ ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ. ಬಂಧಿತರು ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮಲಪ್ಪುರಂ ಮಕ್ಕಳ ಸಂರಕ್ಷಣಾ ಕೇಂದ್ರ(ಸಿಡಬ್ಲ್ಯೂಸಿ) ಅಧ್ಯಕ್ಷ ಶಜೇಶ್ ಭಾಸ್ಕರ್ ಮಾತನಾಡಿ, 'ಸಂತ್ರಸ್ತೆ ಒಂದು ವರ್ಷದ ಹಿಂದೆ ಬಿಡುಗಡೆಯಾದಾಗ ಆಕೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕಾನೂನು ಮತ್ತು ತಾರ್ಕಿಕ ಕ್ರಮಗಳನ್ನು ಅನುಸರಿಸಲಾಗಿತ್ತು, ಐದು ಸದಸ್ಯರ ಸಮಿತಿಯು ಮಕ್ಕಳ ಸಂರಕ್ಷಣಾ ಅಧಿಕಾರಿಯೊಂದಿಗೆ ಸಮಾಲೋಚಿಸಿ ಬಿಡುಗಡೆ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದನ್ನು ಬಾಲಾಪರಾಧಿ ನ್ಯಾಯ ಕಾಯ್ದೆಗೆ ಅನುಗುಣವಾಗಿ ಮಾಡಲಾಗಿತ್ತು' ಎಂದು ಹೇಳಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp