ಸೂರತ್ ಟ್ರಕ್ ಅಪಘಾತ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

ಗುಜರಾತ್ ನ ಸೂರತ್ ನಲ್ಲಿ ಸಂಭವಿಸಿದ ಭೀಕರ ಟ್ರಕ್ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಕಾರ್ಯಾಲಯ ಸಂತ್ರಸ್ಥರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ.

Published: 19th January 2021 11:21 AM  |   Last Updated: 19th January 2021 12:46 PM   |  A+A-


File photo

ಸಂಗ್ರಹ ಚಿತ್ರ

Posted By : Srinivasamurthy VN
Source : ANI

ಸೂರತ್: ಗುಜರಾತ್ ನ ಸೂರತ್ ನಲ್ಲಿ ಸಂಭವಿಸಿದ ಭೀಕರ ಟ್ರಕ್ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ಕಾರ್ಯಾಲಯ ಸಂತ್ರಸ್ಥರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದೆ.

ಗುಜರಾತ್‌ನ ಕೋಸಂಬಾದಲ್ಲಿ ವಲಸೆ ಕಾರ್ಮಿಕರ ಮೇಲೆ ಟ್ರಕ್ ಹರಿದ ಪರಿಣಾಮ ಸ್ಥಳದಲ್ಲೇ 13 ಮಂದಿ ಸಾವನ್ನಪ್ಪಿದ್ದರು.  ಮೃತಪಟ್ಟಿರುವ ಎಲ್ಲರೂ ರಾಜಸ್ಥಾನದ ಬಾಂಸ್ವಾಡಾದಿಂದ ಬಂದಿದ್ದ ವಲಸೆ ಕಾರ್ಮಿಕರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೋಮವಾರ ರಾತ್ರಿ ಕಾರ್ಮಿಕರು ಫುಟ್‌ಪಾತ್‌ ಮೇಲೆ ನಿದ್ರೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿರುವ ಕಬ್ಬು ತುಂಬಿದ್ದ ಟ್ರಕ್‌, ಚಾಲಕನ ನಿಯಂತ್ರಣಕ್ಕೆ ಸಿಗದೆ ಫುಟ್‌ಪಾತ್‌ ಮೇಲೆ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 13 ಮಂದಿ ಮೃತಪಟ್ಟಿದ್ದು, ಗಾಯಗೊಂಡಿರುವ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದು, 'ಸೂರತ್‌ನಲ್ಲಿ ನಡೆದ ಟ್ರಕ್ ಅಪಘಾತದಿಂದಾಗಿ ಆಘಾತಗೊಂಡಿದ್ದೇನೆ. ಸಂತ್ರಸ್ಥ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಅಂತೆಯೇ ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ ಎಂದು  ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಪರಿಹಾರ ಘೋಷಣೆ ಮಾಡಿದ ಪ್ರಧಾನಮಂತ್ರಿ ಕಚೇರಿ
ಇತ್ತ ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟ್ ಬೆನ್ನಲ್ಲೇ ಅತ್ತ ಪ್ರಧಾನಿ ಕಚೇರಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದೆ. ಸಾವಿಗೀಡಾದ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಘೋಷಣೆ ಮಾಡಿದೆ. 

ಪರಿಹಾರ ಘೋಷಣೆ ಮಾಡಿದ ಸಿಎಂ ಗೆಹ್ಲೂಟ್
ಇತ್ತ ರಾಜಸ್ಥಾನ ಸಿಎಂ ಆಶೋಕ್ ಗೆಹ್ಲೂಟ್ ಅವರೂ ಕೂಡ ಪರಿಹಾರ ಘೋಷಣೆ ಮಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ ನೀಡುವ ಕುರಿತು ಘೋಷಣೆ ಮಾಡಿದರು.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp