ಕಾಶ್ಮೀರ: ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ, ನಾಲ್ವರು ಭಾರತೀಯ ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿಪಾಕಿಸ್ತಾನ ಸೇನೆ ಬುಧವಾರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ..
Published: 20th January 2021 02:59 PM | Last Updated: 20th January 2021 02:59 PM | A+A A-

ಭಾರತೀಯ ಸೇನೆ
ಕಮ್ಮು: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿಪಾಕಿಸ್ತಾನ ಸೇನೆ ಬುಧವಾರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅಖ್ನೂರ್ ಸೆಕ್ಟರ್ ನ ಕೇರಿ ಬಟ್ಟಲ್ ಪ್ರದೇಶದಲ್ಲಿ ಪಾಕ್ ಸೇನೆ ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದರಿಂದ ಸೇನೆಯ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಗಾಯಗೊಂಡ ನಾಲ್ವರು ಸೈನಿಕರನ್ನು ಚಿಕಿತ್ಸೆಗಾಗಿ ಉದಂಪೂರ್ನ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.