ಮುಂಬೈ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, 3 ಆರೋಪಿಗಳ ಬಂಧನ

ವಾಣಿಜ್ಯ ನಗರಿ ಮುಂಬೈನಲ್ಲಿ ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ  ನಡೆಸಿದ್ದು, ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 

Published: 20th January 2021 01:35 PM  |   Last Updated: 20th January 2021 01:35 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 

ಪಶ್ಚಿಮ ಉಪನಗರಗಳ ಜುಹು ಬೀಚ್ ಬಳಿಯ ಹೋಟೆಲ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ, 

ರೂಪದರ್ಶಿಯರನ್ನು ಬಲವಂತವಾಗಿ ವೇಶ್ಯವಾಟಿಕೆಯಲ್ಲಿ ತೊಡಗುವಂತೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ದಾಳಿ ವೇಳೆ ಪೊಲೀಸರು 8 ಮಂದಿ ರೂಪದರ್ಶಿಗಳನ್ನು ರಕ್ಷಣೆ ಮಾಡಿದ್ದು, ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp