ತಮಿಳುನಾಡು ಆರೋಗ್ಯ ಸಚಿವ ವಿಜಯಭಾಸ್ಕರ್ ಗೆ ಶುಕ್ರವಾರ ಕೋವಿಡ್ ಲಸಿಕೆ

ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್ -19 ಲಸಿಕೆ ಹಾಕಿಸಿಕೊಳ್ಳುವುದಾಗಿ ತಮಿಳುನಾಡು ಆರೋಗ್ಯ ಸಚಿವ ಡಾ.ಸಿ.ವಿಜಯಭಾಸ್ಕರ್ ಅವರು ತಿಳಿಸಿದ್ದಾರೆ.

Published: 20th January 2021 03:29 PM  |   Last Updated: 20th January 2021 03:29 PM   |  A+A-


tn-vijay

ವಿಜಯಭಾಸ್ಕರ್

Posted By : Lingaraj Badiger
Source : The New Indian Express

ಚೆನ್ನೈ: ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್ -19 ಲಸಿಕೆ ಹಾಕಿಸಿಕೊಳ್ಳುವುದಾಗಿ ತಮಿಳುನಾಡು ಆರೋಗ್ಯ ಸಚಿವ ಡಾ.ಸಿ.ವಿಜಯಭಾಸ್ಕರ್ ಅವರು ತಿಳಿಸಿದ್ದಾರೆ.

ರಾಜ್ಯಕ್ಕೆ ಹೆಚ್ಚುವರಿಯಾಗಿ ಬಂದ 5,08,500 ಡೋಸ್ ಲಸಿಕೆಯನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತಾವೂ ಸಹ ಕೊರೋನಾ ಲಸಿಕೆ ತೆಗೆದುಕೊಳ್ಳುವುದಾಗಿ ಹೇಳಿದರು.

“ಈ ಮೊದಲು ಜನರಲ್ಲಿ ಸ್ವಲ್ಪ ಭಯವಿತ್ತು ಮತ್ತು ಪೊಂಗಲ್ ಹಬ್ಬವೂ ಇತ್ತು. ಜನರ ಆತಂಕ ದೂರ ಮಾಡಲು ಹಲವು ವೈದ್ಯರು ಮತ್ತು ಭಾರತೀಯ ವೈದ್ಯಕೀಯ ಸಂಘದ ಸದಸ್ಯರು ಲಸಿಕೆ ತೆಗೆದುಕೊಂಡಿದ್ದಾರೆ. ನಾನು ಸಹ ಈಗ ಲಸಿಕೆ ಹಾಕಿಸಿಕೊಳ್ಳಲು ನಿರ್ಧರಿಸಿದ್ದು, ಮಂತ್ರಿಯಾಗಿ ಅಲ್ಲ. ವೈದ್ಯರಾಗಿ ಮತ್ತು ಐಎಂಎ ಸದಸ್ಯರಾಗಿ" ಎಂದು ಸಚಿವರು ಹೇಳಿದರು.

ನಾನು ಆರೋಗ್ಯ ಸಿಬ್ಬಂದಿ ಮತ್ತು ನರ್ಸ್ ಗಳಿಗೆ ಆತ್ಮವಿಶ್ವಾಸವನ್ನು ಹೆಚ್ಚಿಸಲು ಲಸಿಕೆ ತೆಗೆದುಕೊಳ್ಳುತ್ತಿದ್ದೇನೆ. ಎರಡಲ್ಲಿ ವೈದ್ಯರು ನೀಡುವ ಒಂದು ಲಸಿಕೆಯನ್ನು ಹಾಕಿಸಿಕೊಳ್ಳುತ್ತೇನೆ ಎಂದು ವಿಜಯಭಾಸ್ಕರ್ ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Coronil tablets

ಕೋವಿಡ್-19 ವಿರುದ್ಧಪತಂಜಲಿಯ ಕೊರೋನಿಲ್ ಮಾತ್ರೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ನೀವು ಭಾವಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp