ಕೋವಿಡ್ ಲಸಿಕೆ ಪಡೆದ ಆಶಾ ಕಾರ್ಯಕರ್ತೆ ಆಸ್ಪತ್ರೆಗೆ ದಾಖಲು!

ದೇಶಾದ್ಯಂತ ಕೋವಿಡ್ ಲಸಿಕಾ ವಿತರಣೆ ಮುಂದುವರೆದಿರುವಂತೆಯೇ ಇತ್ತ ಕೋವಿಡ್ ಲಸಿಕೆ ಪಡೆದ ಆಶಾ ಕಾರ್ಯಕರ್ತೆಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್ ನ ಫಿರೋಜ್ ಪುರದಲ್ಲಿ ನಡೆದಿದೆ.

Published: 21st January 2021 12:29 PM  |   Last Updated: 21st January 2021 12:29 PM   |  A+A-


COVID-19 vaccine

ಸಂಗ್ರಹ ಚಿತ್ರ

Posted By : Srinivasamurthy VN
Source : PTI

ಫಿರೋಜ್ ಪುರ: ದೇಶಾದ್ಯಂತ ಕೋವಿಡ್ ಲಸಿಕಾ ವಿತರಣೆ ಮುಂದುವರೆದಿರುವಂತೆಯೇ ಇತ್ತ ಕೋವಿಡ್ ಲಸಿಕೆ ಪಡೆದ ಆಶಾ ಕಾರ್ಯಕರ್ತೆಯೊಬ್ಬರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಂಜಾಬ್ ನ ಫಿರೋಜ್ ಪುರದಲ್ಲಿ ನಡೆದಿದೆ.

ಫಿರೋಜ್ ಪುರದ ಸಿವಿಲ್ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದಿದ್ದ 35 ವರ್ಷದ ಆಶಾ ಕಾರ್ಯಕರ್ತೆ ಬಿಂದಿಯಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಬಿಂದಿಯಾ ಅವರಲ್ಲಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅಲ್ಲದೆ ಅವರ ರಕ್ತದೊತ್ತಡ ತೀವ್ರವಾಗಿ ಕುಸಿದಿತ್ತು. ಹೀಗಾಗಿ ಅವರನ್ನು ಕೂಡಲೇ ಸ್ಥಳೀಯ ಕ್ಲಿನಿಕ್ ಕರೆದೊಯ್ಯಲಾಯಿತು. ಅವರನ್ನು ಪರೀಕ್ಷಿಸಿದ ವೈದ್ಯರು ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದರು. ಅದರಂತೆ ಬಿಂದಿಯಾ ಅವರನ್ನು  ಫಿರೋಜ್ ಪುರದಲ್ಲಿರುವ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಪ್ರಸ್ತುತ ಬಿಂದಿಯಾ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದ್ದು, ನುರಿತ ತಜ್ಞರು ಬಿಂದಿಯಾ ಅವರ ಆರೋಗ್ಯದ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅಂತೆಯೇ ಅವರ ಆರೋಗ್ಯದ ಮೇಲಿನ ಪ್ರತೀ ಬೆಳವಣಿಗೆಗಳನ್ನೂ ವರದಿ ಮಾಡುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

ಈ ಬಗ್ಗೆ ಫಿರೋಜ್‌ಪುರ ತುರ್ತು ವೈದ್ಯಕೀಯ ಅಧಿಕಾರಿ, ಡಾ.ಶಶಿ ಭೂಷಣ್ ಅವರು ಮಾಹಿತಿ ನೀಡಿದ್ದು, ಆಶಾ ಕಾರ್ಯಕರ್ತೆ ಬಿಂದಿಯಾ ಅವರಿಗೆ ಮಂಗಳವಾರ ಲಸಿಕೆ ನೀಡಲಾಗಿತ್ತು. ಆ ಬಳಿಕ ಅವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.  ಮಂಗಳವಾರ ರಾತ್ರಿ ತನ್ನ ಮನೆಯಲ್ಲಿ ಕಳೆದಿದ್ದ ಆಕೆ ಬುಧವಾರ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಅವರಿಗೆ ಚಿಕಿತ್ಸೆ ಮುಂದುವರೆದಿದ್ದು, ಇದು ಲಸಿಕೆಯ ಅಡ್ಡ ಪರಿಣಾಮ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 

Stay up to date on all the latest ರಾಷ್ಟ್ರೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp