ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿ ಪ್ರಸ್ತಾವ: ಕೇಂದ್ರದ ಅಸಮ್ಮತಿ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿ ನೀಡುವ ಪ್ರಸ್ತಾವಕ್ಕೆ ನಮ್ಮ ಸಮ್ಮತಿ ಇಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.

Published: 21st January 2021 07:05 PM  |   Last Updated: 21st January 2021 07:05 PM   |  A+A-


medical colleges

ಸಾಂದರ್ಭಿಕ ಚಿತ್ರ

Posted By : Lingaraj Badiger
Source : The New Indian Express

ಚೆನ್ನೈ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿ ನೀಡುವ ಪ್ರಸ್ತಾವಕ್ಕೆ ನಮ್ಮ ಸಮ್ಮತಿ ಇಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.

"ಯಾವುದೇ ಕೃತಕ ಮೀಸಲಾತಿ ವೈದ್ಯಕೀಯ ಪೂರ್ವ ಶಿಕ್ಷಣದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರ ಮೀಸಲಾತಿ ಪರವಾಗಿ ಇಲ್ಲ'' ಎಂದು ಆರೋಗ್ಯ ಸಚಿವಾಲಯ ಉತ್ತರಿಸಿದೆ.

"ತಮಿಳುನಾಡು ಸರ್ಕಾರ ಶಾಸನದ ಮೂಲಕ, ರಾಜ್ಯದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶದಲ್ಲಿ ಶೇ. 7.5 ರಷ್ಟು ಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ ಈ ಬಗ್ಗೆ ಕೇಂದ್ರಕ್ಕೆ ಯಾವುದೇ ಉಲ್ಲೇಖವನ್ನು ನೀಡಿಲ್ಲ" ಎಂದು ಸಚಿವಾಲಯ ತಿಳಿಸಿದೆ.

ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ. 10 ರಷ್ಚು ಮೀಸಲಾತಿ ನೀಡುವ ಪ್ರಸ್ತಾವನೆಗೆ ಪುದುಚೇರಿ ಸಚಿವ ಸಂಪುಟ ಅನುಮೋದನೆ ನೀಡಿದೆ. ಆದರೆ ಲೆಫ್ಟಿನೆಂಟ್ ಗವರ್ನರ್ ಇದಕ್ಕೆ ಒಪ್ಪಿಗೆ ನೀಡಿಲ್ಲ. ಹೀಗಾಗಿ ಅನುಮೋದನೆ ನೀಡಬೇಕು ಎಂದು ಕೋರಿ ಪುದುಚೇರಿಯ ವಿದ್ಯಾರ್ಥಿ ಸುಬ್ಬುಲಕ್ಷ್ಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಬಿ. ಪುಗಲೆಂಧಿ ಅವರ ಪೀಠಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
Second phase election for urban local bodies on May 29

ಪುದುಚೇರಿ ಮತ್ತು ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರಗಳು ಪತನಗೊಂಡ ಉದಾಹರಣೆ ನೋಡಿದರೆ, ಚುನಾವಣೆಗಳು ಕೇವಲ ಹಳೇಯ ಪ್ರಜಾಪ್ರಭುತ್ವದ ಸಂಕೇತಗಳಾಗಿವೆಯೇ?


Result
ಹೌದು
ಇಲ್ಲ
flipboard facebook twitter whatsapp